Karwar | ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಕಾರವಾರ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆಗೆ ಬೆಂಬಲ!

IMG 20261105 WA0038 IMG 20261105 WA0038

Karwar | ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಕಾರವಾರ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆಗೆ ಬೆಂಬಲ!

ಕಾರವಾರ: ವಕೀಲರ ಮೇಲಿನ ಕೊಲೆ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿರುವ ಕಾರವಾರದ ಉತ್ತರ ಕನ್ನಡ ಜಿಲ್ಲಾ ವಕೀಲರ ಸಂಘ, ರಾಜ್ಯದಲ್ಲಿ ಬಲವಾದ ಮತ್ತು ಪರಿಣಾಮಕಾರಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಸರ್ಕಾರವನ್ನು ಆಗ್ರಹಿಸಿದೆ.

ಬೆಂಗಳೂರಿನ ವೈಟ್‌ಫೀಲ್ಡ್‌ನ ವಕೀಲ ಮಂಜುನಾಥ್ ಹಾಗೂ ಅನ್ನಪೂರ್ಣೇಶ್ವರಿ ನಗರದ ವಕೀಲ ಶ್ರೀರಾಮ್ ಅವರ ಬರ್ಬರ ಹತ್ಯೆಯನ್ನು ಖಂಡಿಸಿರುವ ಸಂಘವು, ಗೌರಿಬಿದನೂರಿನ ವಕೀಲ ವೆಂಕಟರಮಣ ಸನ್ನಕ್ಕಿ ಅವರ ಮೇಲಿನ ಕೊಲೆ ಯತ್ನವನ್ನೂ ಖಂಡಿಸಿದೆ.

ವಕೀಲರು ತಮ್ಮ ವೃತ್ತಿಪರ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಇಂತಹ ದಾಳಿಗಳು ನಡೆಯುತ್ತಿರುವುದು ಕಾನೂನು ವೃತ್ತಿಯಲ್ಲಿ ಆತಂಕ ಮತ್ತು ಅಭದ್ರತೆಯ ವಾತಾವರಣ ಸೃಷ್ಟಿಸಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

Advertisement

ವಕೀಲರಿಗೆ ಸೂಕ್ತ ಭದ್ರತೆ ಒದಗಿಸುವುದರ ಜತೆಗೆ, ಕರ್ನಾಟಕದಲ್ಲಿ ಬಲವಾದ ಮತ್ತು ಪರಿಣಾಮಕಾರಿ ವಕೀಲರ ರಕ್ಷಣಾ ಕಾಯ್ದೆಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಮುಖ್ಯಮಂತ್ರಿ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗಿದೆ.

ಬೆಂಗಳೂರು ವಕೀಲರ ಸಂಘದ ಕರೆಯ ಮೇರೆಗೆ ನವೆಂಬರ್ 3ರಂದು ಕಾರವಾರ ಜಿಲ್ಲಾ ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪದಿಂದ ದೂರ ಉಳಿಯಲು ಸರ್ವಾನುಮತದಿಂದ ನಿರ್ಧರಿಸಿದ್ದರು.

ವಕೀಲರ ವೃತ್ತಿಯ ಗೌರವ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಘ ಆಗ್ರಹಿಸಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement