Karwar | ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಬಾಲಕಿ ಮೇಲಿನ ದೌರ್ಜನ್ಯ ಪ್ರಕರಣದ ಆರೋಪಿ ಬಂಧನ

Karwar Majali minor assault case accused arrested by Uttara Kannada police in Mumbai Karwar Majali minor assault case accused arrested by Uttara Kannada police in Mumbai
Karwar Majali minor assault case accused arrested by Uttara Kannada police in Mumbai

Karwar | ಮುಂಬೈನಲ್ಲಿ ತಲೆಮರೆಸಿಕೊಂಡಿದ್ದ ಬಾಲಕಿ ಮೇಲಿನ ದೌರ್ಜನ್ಯ ಪ್ರಕರಣದ ಆರೋಪಿ ಬಂಧನ.

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ (karwar) ತಾಲೂಕಿನ ಮಾಜಾಳಿ ಸಮೀಪ 10 ವರ್ಷದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆರೋಪಿ ಸಂಶಾದ್‌ನನ್ನು ಪೊಲೀಸರು ಮಹಾರಾಷ್ಟ್ರದ ಮುಂಬೈ ಶಿವಾಜಿನಗರದಲ್ಲಿ ಬಂಧಿಸಿದ್ದಾರೆ.

ಮಾಜಾಳಿಯ ಸಂದೀಪ ವರ್ಣೇಕರ ಅವರಿಗೆ ಸೇರಿದ ಅಂಗಡಿಯಲ್ಲಿ ಇಕ್ಬಾಲ್ ಎಂಬುವವರು ಬಾಡಿಗೆಗೆ ಸಲೂನ್ ನಡೆಸುತ್ತಿದ್ದರು. ಈ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಸಂಶಾದ್, ಅಂಗಡಿಗೆ ಬಂದಿದ್ದ 10 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು.

Karwar Majali minor assault case accused arrested by Uttara Kannada police in Mumbai
Karwar Majali minor assault case accused arrested by Uttara Kannada police in Mumbai

ಘಟನೆ ನಡೆದ ಸಂದರ್ಭದಲ್ಲಿ ಬಾಲಕಿ ಜೋರಾಗಿ ಕೂಗಿಕೊಂಡಿದ್ದು, ಆಕೆಯ ಅಕ್ಕ ಸ್ಥಳಕ್ಕೆ ಧಾವಿಸಿದ್ದಳು. ಬಳಿಕ ತಾಯಿ ಹಾಗೂ ಅಕ್ಕ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿತ್ತು. ಈ ಸಂಬಂಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement

ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿ ಸಂಶಾದ್ ತಲೆಮರೆಸಿಕೊಂಡಿದ್ದ. ಆರೋಪಿಯ ಪತ್ತೆಗಾಗಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು.Karwar | ಹೇರ್ ಕಟ್ಟ್ ಮಾಡಿಸಲು ಬಂದ 10 ವರ್ಷದ ಬಾಲಕಿ ಮೇಲೆ ಕೌರಿಕನಿಂದ ಲೈಂಗಿಕ ದೌರ್ಜನ್ಯ 

ನಿರಂತರ ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು, ಮುಂಬೈ ಶಿವಾಜಿನಗರದಲ್ಲಿ ಅಡಗಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಆರೋಪಿಯನ್ನು ಕಾರವಾರಕ್ಕೆ ಕರೆತಂದಿದ್ದು, ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆ ಹಾಗೂ ತನಿಖೆ ಕೈಗೊಂಡಿದ್ದಾರೆ.

ಆರೋಪಿ ಬಂಧನಕ್ಕೆ ಆಗ್ರಹಿಸಿ ನಡೆದಿತ್ತು ಪ್ರತಿಭಟನೆ

10 ವರ್ಷದ ಬಾಲಕಿ ಮೇಲಿನ ದೌರ್ಜನ್ಯದ ಆರೋಪ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಆರೋಪಿಯನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದೂ ಸಂಘಟನೆಗಳು ಹಾಗೂ ಸಾರ್ವಜನಿಕರು ಚಿತ್ತಾಕುಲ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.Karwar | ದೀಪಾವಳಿಗಾಗಿ ಹಚ್ಚಿದ ಹಣತೆ ಸ್ವಲ್ಪದರಲ್ಲೇ ತಪ್ಪಿದ ಭಾರೀ ಬೆಂಕಿ ಅವಘಡ 

ಇದೀಗ ಮುಂಬೈನಲ್ಲಿ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement