Karwar | ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರವೂ ಇಳಿಸುತ್ತೇವೆ: ಶಾಸಕ ಸತೀಶ್ ಸೈಲ್

Videoshot 20261105 152752 Videoshot 20261105 152752

IMG 20261105 140902

Karwar | ಪೆಟ್ರೋಲ್, ಡೀಸೆಲ್ ದರ ಇಳಿಸಿದರೆ ಬಸ್ ಪ್ರಯಾಣ ದರವೂ ಇಳಿಸುತ್ತೇವೆ: ಶಾಸಕ ಸತೀಶ್ ಸೈಲ್

ಕಾರವಾರ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಿದರೆ ರಾಜ್ಯದಲ್ಲಿಯೂ ಬಸ್ ಪ್ರಯಾಣ ದರ ಇಳಿಕೆ ಮಾಡಬಹುದು ಎಂದು ಕಾರವಾರ ಶಾಸಕ ಸತೀಶ್ ಸೈಲ್ ಹೇಳಿದ್ದಾರೆ.

ಕಾರವಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿವೆ. ಕೇಂದ್ರ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿದಾಗ ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಹೆಚ್ಚಿಸದಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.Karwar | ಅತೀ ವೇಗ ತಂದ ಆಪತ್ತು ದ್ವಿಚಕ್ರವಾಹನದ ಡಿಕ್ಕಿಗೆ ಸವಾರ ಸಾ** ಇಬ್ಬರಿಗೆ ಗಾಯ

Advertisement

ಮುಖ್ಯಮಂತ್ರಿಗಳು ಈ ಕುರಿತು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಿದರೆ ರಾಜ್ಯ ಸರ್ಕಾರವೂ ಬಸ್ ದರ ಇಳಿಕೆ ಮಾಡಲಿದೆ ಎಂದರು.

ರೈತರ ಹಿತದೃಷ್ಟಿಯಿಂದ ಹಾಲಿನ ದರ ಏರಿಕೆ:

ಹಾಲಿನ ದರ ಏರಿಕೆ ವಿಚಾರವಾಗಿ ಮಾತನಾಡಿದ ಸತೀಶ್ ಸೈಲ್, ರೈತರ ಹಿತದೃಷ್ಟಿಯಿಂದ ಹಾಲಿನ ದರ ಹೆಚ್ಚಿಸಲಾಗಿದ್ದು, ಏರಿಕೆಯಾದ ಹಣವನ್ನು ರೈತರಿಗೆ ನೀಡಲಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸರಿಯಾದ ನಿರ್ಧಾರ ಕೈಗೊಂಡಿದ್ದಾರೆ. ನಾವು ಮುಖ್ಯಮಂತ್ರಿಗಳ ನಿರ್ಧಾರದೊಂದಿಗೆ ಇದ್ದೇವೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗಾಗಿ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, ಬಜೆಟ್‌ನಲ್ಲಿಯೇ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಮೀಸಲಿಡಲಾಗಿದೆ ಎಂದರು.

ಬಿಜೆಪಿ ನಾಯಕರೇ ಹೆಚ್ಚಿನ ಸಂಖ್ಯೆಯಲ್ಲಿ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ಈ ಕುರಿತು ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಪಟ್ಟಿ ಸಿದ್ಧವಾದ ಬಳಿಕ ಪ್ರತಿ ಜಿಲ್ಲೆಯಲ್ಲೂ ಪ್ರಕಟಿಸಲಾಗುವುದು ಎಂದು ಹೇಳಿದರು.

ದೀಪಾವಳಿ ಉಡುಗೊರೆಯಾಗಿ ಗೃಹಲಕ್ಷ್ಮಿ ಯೋಜನೆಯ ಮೂರು ತಿಂಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದರು.

ಅಭಿವೃದ್ಧಿ ಅನುದಾನದ ಆರೋಪಕ್ಕೆ ಸತೀಶ್ ಸೈಲ್ ತಿರುಗೇಟು

ರಾಜ್ಯ ಸರ್ಕಾರ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪದ ಬಗ್ಗೆಯೂ ಶಾಸಕ ಸತೀಶ್ ಸೈಲ್ ಪ್ರತಿಕ್ರಿಯಿಸಿದ್ದಾರೆ.

ತಮ್ಮ ಶಾಸಕತ್ವದ ಅವಧಿಯಲ್ಲಿ ಸುಮಾರು 1,500 ಕೋಟಿ ರೂಪಾಯಿ ಅನುದಾನ ದೊರೆತಿದೆ. ಈ ಹಣವನ್ನು ಯಾವ ಯಾವ ಇಲಾಖೆಗಳ ಮೂಲಕ ಎಲ್ಲಿ ಖರ್ಚು ಮಾಡಲಾಗಿದೆ ಎಂಬ ಸಂಪೂರ್ಣ ಲೆಕ್ಕವನ್ನು ನೀಡಲು ಸಿದ್ಧನಿದ್ದೇನೆ. ಆರೋಪಗಳು ಸುಳ್ಳಾಗಿದ್ದರೆ ಸಾರ್ವಜನಿಕವಾಗಿ ಪ್ರಶ್ನಿಸಬಹುದು ಎಂದು ಸವಾಲು ಹಾಕಿದರು.

ಪ್ರತಿ ತಾಲೂಕಿಗೆ 50 ಕೋಟಿ ರೂಪಾಯಿ ಹಾಗೂ ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಜನರಿಗೆ ಅಗತ್ಯವಿರುವ ರಸ್ತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಶಾಸಕರಿಗೂ ಅನುದಾನ ನೀಡಲಾಗುತ್ತದೆ. ಅನುದಾನ ಹಂಚಿಕೆಯಲ್ಲಿ ಅನುಪಾತದಲ್ಲಿ ವ್ಯತ್ಯಾಸವಿರಬಹುದು. ಆದರೆ ಯಾರನ್ನೂ ಖಾಲಿ ಕೈಯಲ್ಲಿ ಕಳುಹಿಸುವುದಿಲ್ಲ. ಬಿಜೆಪಿ ಶಾಸಕರಿಗೂ ಕನಿಷ್ಠ ಶೇ.50ರಷ್ಟು ಅನುದಾನ ದೊರೆಯಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಸತೀಶ್ ಸೈಲ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಹೋರಾಟ

.ಮತ ಉಳಿಸಿ, ದೇಶ ಉಳಿಸಿ ಅಭಿಯಾನದ ಅಂಗವಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಲು ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕದಿಂದ  ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು  ಪ್ರತಿಭಟನೆ ನಡೆಸಲಾಯಿತು. ಎಸ್.ಐ.ಆರ್ ಅನ್ನು ರದ್ದುಪಡಿಸಬೇಕು , ಮುಖ್ಯ ಚುನಾವಣಾಆಯುಕ್ತರನ್ನ ವಜಾ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಅದಿಕಾರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರಸ್ ಅಧ್ಯಕ್ಷ ಜಿ.ಡಿ ನಾಯ್ಕ , ಶಾಸಕ ಸತೀಶ್ ಸೈಲ್ ಸೇರಿದಂತೆ ಅನೇಕರು ಉಪಸ್ತಿತರಿದ್ದರು.

 

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement