Karwar|ನಾವು ಬದುಕಿದ್ದೇವೆ ಎಂದು ತೋರಿಸಿಕೊಟ್ಟ ಯುವ ಕಾಂಗ್ರೆಸ್ ! 

Karwar:-ಕಾರವಾರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಯುವ ಕಾಂಗ್ರೆಸ್ ಕಾರ್ಯಕರ್ತರ ಚಿತ್ರ ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಯುವ ಕಾಂಗ್ರೆಸ್ ಕಾರ್ಯಕರ್ತರ ಚಿತ್ರ
ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಯುವ ಕಾಂಗ್ರೆಸ್ ಕಾರ್ಯಕರ್ತರ ಚಿತ್ರ

Karwar|ನಾವು ಬದುಕಿದ್ದೇವೆ ಎಂದು ತೋರಿಸಿಕೊಟ್ಟ ಯುವ ಕಾಂಗ್ರೆಸ್ !

 

Karwar|ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಲ್ಕು ಶಾಸಕರನ್ನ ಹೊಂದಿರುವ ಕಾಂಗ್ರೆಸ್ ಪಕ್ಷ ಸಂಘಟನೆ ವಿಷಯದಲ್ಲಿ ಯಾವಾಗಲೂ ಹಿಂದೆ.

Advertisement

ಚುನಾವಣೆ ಬರುವ ವರೆಗೂ ಕಾಂಗ್ರೆಸ್ ನಾಯಕರು ಎಲ್ಲಿ ಎಂಬ ಪ್ರಶ್ನೆಗಳು ಏಳುತ್ತಲೇ ಇರುತ್ತವೆ.ಹೀಗಿರುವಾಗ ಕಾಂಗ್ರೆಸ್ ನ ಸೇವಾದಳ, ಯುವ ಕಾಂಗ್ರೆಸ್ ಘಟಕ, ಎನ್ .ಎಸ್.ಯ.ಐ ಗಳು ಸಂಘಟನಾತ್ಮಕವಾಗಿ ಹೋಗಲಿ ಯಾವುದೇ ಕಾರ್ಯಚಟುವಟಿಕೆ ನಡೆಸದೇ ಅಸ್ತಿತ್ವ ಕಳೆದುಕೊಂಡಿದೆ.

Karwar| ಹೊಸ ಸಿಮೆಂಟ್ ರಸ್ತೆಗೆ ಗುಂಡಿ ಮುಚ್ಚುವ ನೆಪದಲ್ಲಿ ಡಾಂಬರೀಕರಣ- ಲೋಕೋಪಯೋಗಿ ಇಲಾಖೆ ಎಡವಟ್ಟು !

ಹೀಗಿರುವಾಗ ಇದೀಗ ಜಿಲ್ಲಾಯುವ ಕಾಂಗ್ರೆಸ್ ಘಟಕ ಇದ್ದಕ್ಕಿದ್ದಂತೆ ತಾವು ಬದುಕಿದ್ದೇವೆ ಎಂದು ತೋರಿಸಿಕೊಟ್ಟಿದೆ.

ಹೌದು ಅಪರೂಪಕ್ಕೆ ಬಿರು ಬೇಸಿಗೆಯಲ್ಲಿ ಗುಡುಗು ಮಿಂಚು ಬಂತು ಎನ್ನುವಂತೆ ಕಾರವಾರದ (karwar)ಜಿಲ್ಲಾಧಿಕಾರಿ ಕಚೇರಿ ಎದುರು ದಿಢೀರ್ ಪ್ರತ್ಯಕ್ಷವಾದ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧರಣಿ ನಡೆಸಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹನೀಫ್ ಖುರೇಶಿ, ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕ ಸೈಯದ್ ಅಶ್ರಫ್. ಖಾದ್ರಿ . ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಮೋದ್ ಸಿರ್ಸಿಕರ್, ಜಿಲ್ಲಾಉಪಾಧ್ಯಕ್ಷ ಹರೀಶ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾವ್ಯಾನಂದ ನಾಯ್ಕ್,  ಶಿರಸಿ ಅಸೆಂಬ್ಲಿ ಅಧ್ಯಕ್ಷರಾದ ಯೋಗಾನಂದ ನಾಯ್ಕ್ ಸೇರಿದಂತೆ ಹಲವು ಯುವ ಕಾಂಗ್ರೆಸ್ ಘಟಕದ ಸದಸ್ಯರು ,ಕಾರ್ಯಕರ್ತರು ಭಾಗಿಯಾಗಿದ್ದರು.

ಈ ಮೂಲಕ ಅಸ್ತಿತ್ವವೇ ಇಲ್ಲದೇ ಇದ್ದ ಯುವ ಕಾಂಗ್ರೆಸ್ ಮಿಂಚು ,ಗುಡುಗಿನಂತೆ ಎರಗಿ ಮಾಯವಾಗಿದೆ.

ಇನ್ನು ನೆಲಕ್ಕೆ ಬಿದ್ದಿರುವ ಕಾಂಗ್ರೆಸ್ ನ ರಕ್ತ ಸಂಬಂಧಿ ಸೇವಾದಳ ಯಾವಾಗ ಪುಡಿದೇಳುತ್ತೆ ಅನ್ನೋದನ್ನ ಕಾದು ನೋಡಬೇಕಿದ್ದು ,ವರ್ಷಕ್ಕೆ ಒಂದುಸಾರಿ ಟೋಪಿ ತೊಟ್ಟು ಕಾಂಗ್ರೆಸ್ ಧ್ವಜ ಕಟ್ಟುವುದಕ್ಕೆ ಸೀಮಿತವಾಗಿದ್ದ ಈ ಸೇವಾದಳ   ವೂ ಜಿಲ್ಲೆಯಲ್ಲಿ ಸಕ್ರಿಯವಾಗಿ ಸಮಾಜದ ಹಿತಕ್ಕಾಗಿ ಕೆಲಸ ಮಾಡಲಿ ಎಂಬುದೇ ಹಾರೈಕೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement