ಕೋಡಿಹಳ್ಳಿ ಚಂದ್ರಶೇಖರ್ ಮಾತು ಕೇಳಿ ಯಾವುದೇ ಇಲಾಖೆ ನೌಕರರು ಮುಷ್ಕರದಲ್ಲಿ ಭಾಗಬಹಿಸಬೇಡಿ- ಶಿವರಾಮ್ ಹೆಬ್ಬಾರ್

1206

ಕಾರವಾರ :- ಕೋಡಿಹಳ್ಳಿ ಚಂದ್ರಶೇಖರ್ ರವರು ಅನಗತ್ಯವಾಗಿ ತಮಗೆ ಅವಷ್ಯಕತೆ ಇಲ್ಲದ ಕ್ಷೇತ್ರಕ್ಕೆ ಮೂಗು ತೂರಿಸಿ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ.ಇವರ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ,ಇವರ ಮಾತು ಕೇಳಿ ಯಾವುದೇ ಇಲಾಖೆಯ ನೌಕರರು ಮುಷ್ಕರದಲ್ಲಿ ಭಾಗವಹಿಸಬೇಡಿ ಎಂದು ಕಾರ್ಮಿಕ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಕಿಡಿ ಕಾರಿದ್ದಾರೆ.ಯಲ್ಲಾಪುರದ ಸ್ವ ಗೃಹದಲ್ಲಿ ಮಾತನಾಡಿದ ಹೆಬ್ಬಾರ್ ಸಾರಿಗೆ ನೌಕರರು ಪ್ರತಿಭಟನೆ ಹಿಂದೆ ಪಡೆದಿದ್ದಕ್ಕೆ ಕಾರ್ಮಿಕ ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು.

ಮೂರು ದಿನದ ಬಳಿಕ ರಸ್ತೆಗಿಳಿದ ಬಸ್ ಗಳು-ಸರ್ಕಾರ ಒಪ್ಪಿಕೊಂಡ ಬೇಡಿಕೆಗಳೇನು?

ಸಾರಿಗೆ ನೌಕರರ ಜೊತೆಗೆ ಸರ್ಕಾರ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಮೂರು ದಿನಗಳ ಬಳಿಕ ಬಸ್ಸುಗಳು ರಸ್ತೆಗೆ ಇಳಿದಿದೆ. ಬೆಂಗಳೂರಿನಿಂದ ಜಿಲ್ಲಾ ಕೇಂದ್ರಗಳಿಗೆ ಬಸ್‌ ಸಂಚಾರ ಆರಂಭವಾಗಿದೆ.

ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ಭಾಗವಹಿಸಿದ್ದ ನೌಕರ ಸಂಘದ ನಾಯಕರು ಸರ್ಕಾರ ನೀಡಿದ ಭರವಸೆಯನ್ನು ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ನಾಯಕರು ಮಾಧ್ಯಮಗಳ ಮೂಲಕ ಸಿಬ್ಬಂದಿಗೆ ನಿರ್ಧಾರವನ್ನು ತಿಳಿಸುತ್ತಿದ್ದಂತೆ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಚಾಲಕರು ಒಂದೊಂದು ಬಸ್ಸುಗಳನ್ನು ತೆಗೆಯುತ್ತಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಸಂಘದ ಮುಖಂಡರು, ಕೋವಿಡ್‌ 19 ಹಿನ್ನೆಲೆಯಲ್ಲಿ ಸದ್ಯಕ್ಕೆ ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಮುಂದೆ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಸಾರಿಗೆ ನೌಕರರು ನಮ್ಮ ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂಬ ಪ್ರಮುಖ ಬೇಡಿಕೆಯನ್ನು ಇಟ್ಟಿದ್ದರು. ಈ ಬೇಡಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಸರ್ಕಾರಿ ನೌಕರರನ್ನಾಗಿ ಮಾಡುತ್ತೇವೆ ಎಂದು ನಾವು ಭರವಸೆ ನೀಡಿಲ್ಲ ಮತ್ತು ಈ ಬೇಡಿಕೆಯನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದೇವೆ. ನಮ್ಮಲ್ಲಿ 40 ನಿಗಮಗಳಿವೆ. ಎಲ್ಲ ನಿಗಮದಲ್ಲಿ ಇರುವ ಕೆಲಸ ಮಾಡುವವರು ಮುಂದೆ ಈ ಬೇಡಿಕೆಯನ್ನು ಇಟ್ಟರೆ ನಮಗೆ ಕಷ್ಟವಾಗಬಹುದು. ಉಳಿದಂತೆ ಅವರ ಇತರ ಬೇಡಿಕೆಯನ್ನು ಈಡೇರಿಸಿದ್ದೇವೆ ಎಂದು ತಿಳಿಸಿದರು.

ಪ್ರತಿಭಟನೆಯ ಹಿನ್ನೆಲೆಯಲ್ಲಿ ವಿಶ್ರಾಂತಿ ಗೃಹದಲ್ಲಿದ್ದ ಸಾರಿಗೆ ಸಿಬ್ಬಂದಿ ಈಗ ಪಾರ್ಕಿಂಗ್‌ ಮಾಡಲಾಗಿದ್ದ ಬಸ್ಸುಗಳನ್ನು ತೆಗೆದು ನಿಲ್ದಾಣಕ್ಕೆ ತರುತ್ತಿದ್ದಾರೆ. ಪ್ರಯಾಣಿಕರ ಸಂಖ್ಯೆಯನ್ನು ನೋಡಿಕೊಂಡು ಬಸ್‌ ಓಡಿಸಲು ಸಿದ್ಧತೆ ಮಾಡಲಾಗಿದೆ. ಇಂದು ರಾತ್ರಿ ಬಹುತೇಕ ಎಲ್ಲ ಕಡೆಗೆ ಬಸ್‌ ಸಂಚರಿಸುವ ಸಾಧ್ಯತೆಯಿದೆ.

ಸರ್ಕಾರ ಒಪ್ಪಿರುವ ಬೇಡಿಕೆಗಳು

  1. ನಿಗಮದ ನೌಕರರಿಗೆ ಆರೋಗ್ಯ ಸಂಜೀವಿನಿ ವಿಮಾ ಯೋಜನೆ ಅಳವಡಿಸಲು ತೀರ್ಮಾನ.
  2. ಕೋವಿಡ್-19 ಸೋಂಕಿನಿಂದ ಮೃತ ಸಿಬ್ಬಂದಿಯ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ.
  3. ಅಂತರ್ ನಿಗಮ ವರ್ಗಾವಣೆ ಕುರಿತು ಸೂಕ್ತ ನೀತಿ ರಚಿಸಲು ತೀರ್ಮಾನ.
  4. ನೌಕರರ ತರಬೇತಿ ಅವಧಿ 2 ರಿಂದ ಒಂದು ವರ್ಷಕ್ಕೆ ಇಳಿಕೆ.
  5. ನಿಗಮದಲ್ಲಿ ಹೆಚ್ಆರ್‌ಎಂಎಸ್‌ತಂತ್ರಾಂಶ ವ್ಯವಸ್ಥೆ ಅಡಿ ಸಂಬಳ ಪಾವತಿ ಜಾರಿ.
  6. ಸಿಬ್ಬಂದಿಯು ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಭತ್ಯೆಯನ್ನು(ಬಾಟಾ) ನೀಡಲು ನಿರ್ಧಾರ.
  7. ಘಟಕದ ವ್ಯಾಪ್ತಿಯಲ್ಲಿ ನೌಕರರಿಗೆ ಕಿರುಕುಳ ತಪ್ಪಿಸಲು ಸೂಕ್ತ ಆಡಳಿತ ವ್ಯವಸ್ಥೆ.
  8. ವೇತನ ಪರಿಷ್ಕರಣೆ, ಆರನೇ ವೇತನ ಆಯೋಗದ ಜಾರಿ ನಡೆಸುವ ಸಂಬಂಧ ಆರ್ಥಿಕ ಇಲಾಖೆ ಜೊತೆ ಚರ್ಚೆ ನಡೆಸಿ ತೀರ್ಮಾನ.ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!