Kumta | ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ ಏಳನೀರು ವ್ಯಾಪಾರಿ ಸಾವು; ಮತ್ತೊಬ್ಬರಿಗೆ ಗಂಭೀರ ಗಾಯ

IMG 20260917 111544 IMG 20260917 111544

IMG 20260913 WA0009Karwar Shetty Eye Hospital

Ad karwar auto
ಕಾರವಾರ ದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿಮ್ಮ ಬಟ್ಟೆಗಳಿಗೆ ಹೊಳಪು ನೀಡುವ ಆರೋ ಡ್ರೈಕ್ಲೀನ್ -ಒಮ್ನೆ ಭೇಟಿ ನೀಡಿ

ಕುಮಟಾ: ಪಟ್ಟಣದ ಎಪಿಎಂಸಿ (APMC) ಬಳಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿಟ್ಟಿದ್ದ ಲಾರಿ ಏಕಾಏಕಿ ಚಲಿಸಿದ ಪರಿಣಾಮ ಏಳನೀರು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಲಾರಿ ಚಾಲಕ ಹೆದ್ದಾರಿ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಚಿಕನ್ ಖರೀದಿಸಲು ತೆರಳಿದ್ದ ಎನ್ನಲಾಗಿದೆ. ಈ ವೇಳೆ ನಿಲ್ಲಿಸಿದ್ದ ಲಾರಿ ಏಕಾಏಕಿ ಚಲಿಸಿ, ಪಕ್ಕದಲ್ಲೇ ಏಳನೀರು ಮಾರಾಟ ಮಾಡುತ್ತಿದ್ದ ಸುಮಾರು 55 ವರ್ಷದ ಕುಮಟಾದ ಬಯಲುಗದ್ದೆ ಮೂಲದ ಉಮೇಶ್ ನಾರಾಯಣ್ ಹಲಮನಕರ್  ಮೇಲೆ ಹರಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Kumta APMC lorry accident in which a tender coconut vendor died after a parked lorry suddenly moved.
Kumta-ಘಟನಾ ಸ್ಥಳ

ಇದೇ ವೇಳೆ ಮೃತ ವ್ಯಕ್ತಿಯ ಪಕ್ಕದಲ್ಲಿ ಹಣ್ಣು ವ್ಯಾಪಾರ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿಗೂ ಲಾರಿ ಡಿಕ್ಕಿಯಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

Advertisement

Kumta accident
ಪಲ್ಟಿಯಾದ ಲಾರಿ

ಘಟನೆ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ವಿಷಯ ತಿಳಿದ ಕೂಡಲೇ ಕುಮಟಾ(kumta) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಕುರಿತು ಮುಂದಿನ ತನಿಖೆ ಕೈಗೊಂಡಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement