Kumta |ದೇವಿಮನೆ ಘಟ್ಟದಲ್ಲಿ ಕಂದಕಕ್ಕೆ ಉರುಳಿದ KSRTC ಬಸ್-12 ಪ್ರಯಾಣಿಕರಿಗೆ ಗಂಭೀರ ಗಾಯ

KSRTC bus falls into a gorge at Devimane Ghat near Mastihalla in Kumta, Uttara Kannada; 12 passengers seriously injured KSRTC bus falls into a gorge at Devimane Ghat near Mastihalla in Kumta, Uttara Kannada; 12 passengers seriously injured
KSRTC bus falls into a gorge at Devimane Ghat near Mastihalla in Kumta, Uttara Kannada; 12 passengers seriously injured
Kannadavani WhatsApp image
ಪ್ರತಿ ದಿನದ ಸುದ್ದಿ ಓದಲು ನಮ್ಮ ವಾಟ್ಸ್ ಅಪ್ ಗ್ರೂಪ್ ಸೇರಲು ಫೋಟೋ ದ ಮೇಲೆ ಕ್ಲಿಕ್ ಮಾಡಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ(kumta) ತಾಲೂಕಿನ ದೇವಿಮನೆ ಘಟ್ಟದ ಮಾಸ್ತಿಹಳ್ಳದ ಬಳಿ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ.

ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ಶಿರಸಿ ಮಾರ್ಗವಾಗಿ ದೇವಿಮನೆ ಘಟ್ಟದ ಮೂಲಕ ತೆರಳುತ್ತಿದ್ದ KSRTC ಬಸ್, ಮಾಸ್ತಿಹಳ್ಳದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಕ್ಕೆ ಉರುಳಿ ಕಂದಕಕ್ಕೆ ಬಿದ್ದಿದೆ. ಇದನ್ನೂ ಓದಿ:-Kumta | ನಾಡುಮಾಸ್ತಿಕೇರಿಯಲ್ಲಿ 62 ಅಕ್ರಮ ರೆಸಾರ್ಟ ತೆರವಿಗೆ ಕೋರ್ಟ ಆದೇಶ ಇದ್ರೂ ಅಧಿಕಾರಿಗಳ ಮೀನಾವೇಶ ! 

ಅಪಘಾತದಲ್ಲಿ 12 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.

Advertisement

ಘಟನೆ ತಿಳಿಯುತ್ತಿದ್ದಂತೆ ಕುಮಟಾ ಠಾಣೆಯ PSI ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ರಕ್ಷಿಸಿ, ಚಿಕಿತ್ಸೆಗಾಗಿ ಕುಮಟಾ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರ ಹೊರಬರಬೇಕಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement