ಮುಖ್ಯಮಂತ್ರಿಯಾಗುವ ಹುಮ್ಮಸ್ಸಿನಲ್ಲಿ ಸಿದ್ದರಾಮಯ್ಯ ಮನಸ್ಸಿಗೆ ಬಂದತೆ ಮಾತನಾಡುತ್ತಿದ್ದಾರೆ-ಸಚಿವ ಶಿವರಾಮ್ ಹೆಬ್ಬಾರ್

294

ಕಾರವಾರ: ಸಿದ್ದರಾಮಯ್ಯನವರ ಮುಖ್ಯಮಂತ್ರಿಯಾಗಬೇಕೆಂಬ ಹುಮ್ಮಸ್ಸಿಗೆ ಡಿ.ಕೆ. ಶಿವಕುಮಾರ್ ಅಡ್ಡಿಯಾದ ಕಾರಣ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿಯವರು ಹಿಟ್ಲರ್ ಸಂಸ್ಕೃತಿಯವರು ಎಂಬ ಹೇಳಿಕೆಗೆ ಕಾರ್ಮಿಕ‌ ಶಿವರಾಮ್ ಹೆಬ್ಬಾರ್ ತಿರುಗೇಟು ನೀಡಿದ್ದಾರೆ.

ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಹೇಳಿಕೆಗಳಿಂದ ಏನೂ ಆಗಲ್ಲ. ಅವರು ವಿಧಾನಸಭೆಯಲ್ಲೂ ಇದನ್ನೇ ಹೇಳಿದ್ದರು. ಅದಕ್ಕೆ ಮುಖ್ಯಮಂತ್ರಿಯವರೂ ಅಲ್ಲಿ ಸರಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಆದರೂ ಅವರಿಗೆ ಸಮಾಧಾನವಾದಂತೆ ಕಾಣುತ್ತಿಲ್ಲ ಎಂದರು.

ಇನ್ನು ಭಾರತ್ ಬಂದ್ ಕುರಿತು ಪ್ರತಿಕ್ರಿಯಿಸಿದ ಅವರು, ಭಾರತ್ ಬಂದ್ ಕರ್ನಾಟಕದಲ್ಲಿ ಯಶಸ್ವಿಯಾಗಿಲ್ಲ. ಅನೇಕ ಸ್ವಯಂಘೋಷಿತ ನಾಯಕರು ಭಾರತ್ ಬಂದ್ ಗೆ ಕರೆಕೊಟ್ಟು ಸಂಪೂರ್ಣ ವಿಫಲತೆ ಕಂಡಿದ್ದಾರೆ.

ಭಾರತ್ ಬಂದ್ ನಿಂದ ಯಾವ ಸಾಧನೆಯೂ ಆಗಿಲ್ಲ. ಕಳೆದ ಒಂದು ವರ್ಷದಿದ ಭಾರತ ಬಂದಾಗಿಯೇ ಇದೆ. ಮತ್ತೆ ಭಾರತ್ ಬಂದ್ ಮಾಡುವುದರಿಂದ ಶಿಕ್ಷಣ, ವ್ಯಾಪಾರ- ಉದ್ಯಮದ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ರಾಜ್ಯದ ಹಾಗೂ ದೇಶದ ಜನ ಈ ಭಾರತ್ ಬಂದ್ ಅನ್ನು ಒಪ್ಪಿಕೊಂಡಿಲ್ಲ, ಪ್ರಬಲವಾಗಿ ವಿರೋಧಿಸಿದ್ದಾರೆ.

ಕೆಲವರು ನೈತಿಕವಾಗಿ ಬೆಂಬಲವನ್ನಷ್ಟೇ ನೀಡಿದ್ದಾರೆ. ಯಾವ ಉದ್ದೇಶಕ್ಕೆ ಭಾರತ್ ಬಂದ್ ಮಾಡಿದ್ದಾರೋ ಈ ಬಗ್ಗೆ ಸರ್ಕಾರ ವಿಧಾನಸಭೆಯ ಒಳಗೆ ಹಾಗೂ ಹೊರಗೆ ತನ್ನ ಪ್ರತಿಕ್ರಿಯೆ ನೀಡಿದೆ. ಒಟ್ಟಾರೆ ದೇಶದಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ನಿಶ್ಚಿತ ಕೆಲಸ ಮಾಡಲಿದೆ ಎಂದರು.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!