Ankola: ಪ್ರೀತಿ ನಿರಾಕರಿಸಿದ ಅಂಕೋಲದ ಯುವತಿಗೆ ಚೂರಿ ಇರಿತ.

Ankola :ಮಣಿಪಾಲದಲ್ಲಿ ಪ್ರೀತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವತಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಯುವತಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿ ಪರಾರಿಯಾಗಿದ್ದಾನೆ.
manipal crime manipal crime

Ankola: ಪ್ರೀತಿ ನಿರಾಕರಿಸಿದ ಅಂಕೋಲದ ಯುವತಿಗೆ ಚೂರಿ ಇರಿತ.

 Ankola/ಮಣಿಪಾಲ: ಪ್ರೀತಿ ನಿರಾಕರಿಸಿ ಯುವತಿಗೆ ಚೂರಿಯಲ್ಲಿ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ- ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಕಟ್ಟಡದ ಮಹಿಳಾ ಪಿಜಿಯಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲ (ankola)ಮೂಲದ ಯೋಗಿತಾ (23) ಮಾರಣಾಂತಿಕ ಹಲ್ಲೆಗೊಳಗಾದವರು.

Advertisement

Ankola|ಬಾವಿಕೇರಿಯಲ್ಲಿ ಅಣು ವಿದ್ಯುತ್ ಸ್ಥಾವರ-ಪ್ರಫೋಸಲ್ ಗೆ ಬ್ರೇಕ್ -ಡಿಸಿ ಏನಂದ್ರು?

 ಮಣಿಪಾಲ-ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್ ನಲ್ಲಿರುವ ಮಹಿಳಾ ಪಿಜಿಯಲ್ಲಿ ವಾಸವಾಗಿದ್ದಳು. ಮಂಗಳವಾರ ರಾತ್ರಿ ಆಕೆಗೆ ಚೂರಿ ಇರಿಯಲಾಗಿದೆ. ಗಂಭೀರ ಗಾಯಗೊಂಡಿರುವ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯುವತಿಯು ಪ್ರೀತಿ ನಿರಾಕರಿಸಿರುವುದಕ್ಕೆ ಭಗ್ನ ಪ್ರೇಮಿ ಈ ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿ ಪರಾರಿಯಾಗಿದ್ದು, ಪೊಲೀಸರು ಪತ್ತೆಗಾಗಿ ಬಲೆ ಬೀಸಿದ್ದಾರೆ. ಘಟನಾಸ್ಥಳಕ್ಕೆ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement