ಗೃಹಲಕ್ಷ್ಮಿ ಯೋಜನೆ ಎಫೆಕ್ಟ್ |ಬ್ಯಾನರ್ ಅಳವಡಿಕೆ ಸಚಿವ ಪ್ರಿಯಾಂಕ ಖರ್ಗೆಗೆ ₹5000 ದಂಡ ವಿಧಿಸಿದ ಪಾಲಿಕೆ

117

ಕಲಬುರಗಿ: ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಕಲಬುರ್ಗಿ ಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಬ್ಯಾನರ್ ನನ್ನು ರಸ್ತೆಯಲ್ಲಿ ಅವರ ಅಭಿಮಾನಿಗಳು ಹಾಕಿದ ಹಿನ್ನಲೆಯಲ್ಲಿ ಕಲಬುರಗಿ (Kalaburagi) ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯದೇ ಬ್ಯಾನರ್ (Banner) ಅಳವಡಿಸಿದ್ದು ಕಂಡುಬಂದ ಹಿನ್ನೆಲೆಯಲ್ಲಿ
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರಿಗೆ ಪಾಲಿಕೆಯಿಂದ ₹5,000 ದಂಡ ವಿಧಿಸಿದೆ.

ಕಲಬುರಗಿ ನಗರದ ಹೊರವಲಯದ ಬಂಗರಗಾ ಕಲ್ಯಾಣ ಮಂಟಪದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ಆಗಮಿಸುತ್ತಿದ್ದ ಸಂದರ್ಭದಲ್ಲಿ ಖರ್ಗೆ ಬೆಂಬಲಿಗರು ಸ್ವಾಗತ ಕೋರುವ ಹಿನ್ನೆಲೆಯಲ್ಲಿ ಬ್ಯಾನರ್ ಹಾಕಿದ್ದರು.ಆದ್ರೆ ಈ ಬಗ್ಗೆ ಅನುಮತಿ ಸಹ ಪಡೆದಿರಲಿಲ್ಲ.ಈ ಹಿನ್ನಲೆಯಲ್ಲಿ ಈ ದಂಡ ಹಾಕಲಾಗಿದ್ದು ಸಚಿವರು ಸಹ ದಂಡ ಕಟ್ಟುವುದಾಗಿ ಹೇಳಿದ್ದು ಪಾಲಿಕೆ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!