ಕಾರವಾರ : ಅಂದಿನ ಕಾರವಾರ-ಜೋಯಿಡಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ವಸಂತ ಅಸ್ನೋಟಿಕರ್ ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದ ಮುಂಬೈ ಮೂಲದ ಶಾರ್ಪ್ ಶೂಟರ್ ಸಂಜಯ ಮೋಹಿತೆಗೆ ಜೀವಾವಧಿ ಶಿಕ್ಷೆ ಹಾಗೂ ₹68 ಸಾವಿರ ದಂಡ ವಿಧಿಸಿ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

2000ನೇ ಇಸವಿಯ ಫೆ.19 ರಂದು ಕಾರವಾರ ನಗರದ ದೈವಜ್ಞ ಭವನದ ಎದುರು ಮಗಳ ಮುದುವೆ ಸಂಭ್ರಮದಲ್ಲಿದ್ದ ಶಾಸಕ ವಸಂತ್ ಆಸ್ನೋಟಿಕರ್ ರನ್ನು ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಈ ಪ್ರಕರಣದಲ್ಲಿ ಇನ್ನಿತರ ಆರೋಪಿಗಳಾಗಿದ್ದ ದಿಲೀಪ ನಾಯ್ಕ 2004ರಲ್ಲಿ ಹತ್ಯೆ ಆಗಿದ್ದರು.
ಉಳಿದ ಆರೋಪಿಗಳಾದ ಬಾಬು, ಅಂತೋನಿಯನ್ನು ಮುಂಬೈ ಪೊಲೀಸರು ಎನ್ ಕೌಂಟರ್ ಮಾಡಿದ್ದರು.
ಪ್ರಕರಣದ ತನಿಖೆ ನಡೆಸಿದ್ದ ಅಪರಾಧ ತನಿಖಾ ದಳ (ಸಿಐಡಿ) ದೋಷಾರೋಪಣ ಪಟ್ಟಿ ಸಲ್ಲಿಸಿತ್ತು.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಅಭಿಯೋಜಕಿ ಸುನಂದಾ ಮಡಿವಾಳರ ವಾದ ಮಂಡಿಸಿದ್ದು ಹಲವು ವರ್ಷದ ವಾದ ವಿವಾಧದ ನಂತರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಪ್ರಕಟ ಮಾಡಲಾಗಿದೆ.