ಆರ್ಟಿಕಲ್ 370 ರದ್ದು ಪ್ರಶ್ನಿಸಿ 20 ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ ನಲ್ಲಿ! ಒಂದು ವಾರದ ಬಳಿಕ ವಿಚಾರಣೆ- ಸಿಜೆಐ

210

ಕನ್ನಡವಾಣಿ ಡೆಸ್ಕ್:- ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮುಂಬರುವ ದಸರಾ ರಜೆಯ ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಈ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ಅವರ ಮುಂದೆ ಪ್ರಸ್ತಾಪಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ದಸರಾ ವಿರಾಮದ ನಂತರ ಅದನ್ನು ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು. ಅಕ್ಟೋಬರ್ 3-10 ವರೆಗೂ ಒಂದು ವಾರದ ದಸರಾ ಹಬ್ಬದ ಹಿನ್ನಲೆ ಕೋರ್ಟ್ ರಜೆಯಲ್ಲಿರಲಿದೆ.

ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ಆಗಸ್ಟ್ 2019 ರ ನಿರ್ಧಾರವನ್ನು ಪ್ರಶ್ನಿಸಿ 20 ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ. ಈ ವಿಧಿಯನ್ನು ರದ್ದುಪಡಿಸುವ ಮೂಲಕ ಕೇಂದ್ರವು ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದೆ. ತರುವಾಯ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು, ಲಡಾಖ್, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾಗಿವೆ.

ಮಾರ್ಚ್ 2020 ರಲ್ಲಿ ಸುಪ್ರೀಂ ಕೋರ್ಟ್‌ನ 5 ನ್ಯಾಯಾಧೀಶರ ಸಂವಿಧಾನಿಕ ಪೀಠವು 370 ನೇ ವಿಧಿಯನ್ನು ಪ್ರಶ್ನಿಸುವ ಅರ್ಜಿಗಳ ಬ್ಯಾಚ್ ಅನ್ನು 7 ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ಉಲ್ಲೇಖಿಸುವ ಅಗತ್ಯವಿಲ್ಲ ಎಂದು ಹೇಳಿತ್ತು. ಕೆಲವು ಅರ್ಜಿದಾರರು ಸುಪ್ರೀಂಕೋರ್ಟ್‌ನ ಎರಡು ತೀರ್ಪುಗಳ ನಡುವೆ ಸಂಘರ್ಷವಿದೆ ಎಂದು ವಾದಿಸಿ 7 ನ್ಯಾಯಾಧೀಶರ ಪೀಠಕ್ಕೆ ಪ್ರಕರಣ ವರ್ಗಾಯಿಸಲು ‌ಮನವಿ ಮಾಡಲಾಗಿತ್ತು. ಆದರೆ, ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಐವರು ನ್ಯಾಯಾಧೀಶರ ಪೀಠ, ಹಿಂದಿನ ಎರಡು ತೀರ್ಪುಗಳ ನಡುವೆ ಯಾವುದೇ ಸಂಘರ್ಷವಿಲ್ಲ ಎಂದು ಪರಿಗಣಿಸಿ ಪ್ರಕರಣವನ್ನು ಮೇಲಿನ ಪೀಠಕ್ಕೆ ವರ್ಗಾಯಿಸಲು ನಿರಾಕರಿಸಿತು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ.

error: Content is protected !!