Mundgod | ಬಾಲಕಿ ಮೇಲಿನ ದೌರ್ಜ್ಯನ್ಯ ಖಂಡಿಸಿ ಮುಂಡಗೋಡು ಬಂದ್ -ವಿಡಿಯೋ ನೋಡಿ:-
ಕಾರವಾರ /ಮುಂಡಗೋಡು :-ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ(mundgod) 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅಮಾನವೀಯ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಹಾಗೂ ಆರೋಪಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ವಿವಿಧ ಹಿಂದೂಪರ ಸಂಘಟನೆಗಳು ಇಂದು ಕರೆದಿದ್ದ ‘ಮುಂಡಗೋಡ ಬಂದ್’ಗೆ ಪಟ್ಟಣದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.Mundgod|12 ವರ್ಷದ ಬಾಲಕಿ ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ್ದ ಆರೋಪಿ ಮನೆ ಧ್ವಂಸ

ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ಮುಚ್ಚಿ ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿದರು. ಸಾಮಾನ್ಯ ದಿನಗಳಲ್ಲಿ ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ವಾಣಿಜ್ಯ ಪ್ರದೇಶಗಳು ದಿನವಿಡೀ ವ್ಯಾಪಾರ ಚಟುವಟಿಕೆಗಳಿಲ್ಲದೆ ಬಿಕೋ ಎನ್ನುತ್ತಿದ್ದವು. ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿವ ಮೂಲಕ ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜನೆ ಮಾಡಿದ್ದು ನಗರದ ವಿವಿಧ ಭಾಗದಲ್ಲಿ ಸಂಚರಿಸಿತು. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.Mundgodu | 12 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ 65 ರ ವೃದ್ಧ !
ಪ್ರತಿಭಟನೆಯಲ್ಲಿ ಹಿಂದೂಪರ ಸಂಘಟನೆಗಳ ಮುಖಂಡ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವು ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿ, ಸಂತ್ರಸ್ತ ಬಾಲಕಿಗೆ ಶೀಘ್ರ ನ್ಯಾಯ ದೊರಕಿಸಿಕೊಡಬೇಕು ಮತ್ತು ಇಂತಹ ಹೇಯ ಕೃತ್ಯ ಎಸಗುವವರಿಗೆ ಸಮಾಜಕ್ಕೆ ಪಾಠವಾಗುವಂತಹ ಕಠಿಣ ಶಿಕ್ಷೆಯಾಗಬೇಕು,ಎಂದು ಒತ್ತಾಯಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಖುದ್ದಾಗಿ ಸ್ಥಳದಲ್ಲಿದ್ದು ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು. ಪಟ್ಟಣದ ಪ್ರಮುಖ ವೃತ್ತಗಳು ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
