ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತಿದ್ದ ಒಂದೇ ಕುಟುಂಬದ ಮೂವರ ರಕ್ಷಣೆ.

1966

ಕಾರವಾರ :- ಸಮುದ್ರಪಾಲಾಗುತಿದ್ದ ಒಂದೇ ಕುಟುಂಬದ ಮೂವರು ಪ್ರವಾಸಿಗರ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಕಡಲ ತೀರದಲ್ಲಿ ಇಂದು ನಡೆದಿದೆ.

ಬೆಂಗಳೂರಿನಿಂದ ಇಂದು ಮುರುಡೇಶ್ವರಕ್ಕೆ ಆಗಮಿಸಿದ್ದ ಒಂದೇ ಕುಟುಂಬದ ಐವರು,ಇಲ್ಲಿನ ಸಮುದ್ರದಲ್ಲಿ ಈಜಾಡುವಾಗ ಅಲೆಗೆ ಮೂವರು ಸಿಲುಕಿದ್ದರು.

ಈ ವೇಳೆ ಸಮುದ್ರದಲ್ಲಿ ಮುಳುಗುತಿದ್ದ ಇವರನ್ನು ಗಮನಿಸಿದ ಓಷನ್ ಅಡ್ವೇಂಚರ್ ನ ಸಂಜೀವ್ ಹರಿಕಾಂತ್, ಚಂದ್ರಶೇಖರ್ ದೇವಾಡಿಗ್ ಎಂಬುವವರು ತಕ್ಷಣ ಬೋಟ್ ಮೂಲಕ ತೆರಳಿ ರಕ್ಷಣೆ ಮಾಡಿದ್ದಾರೆ.

ಬೆಂಗಳೂರಿನ ಕತ್ರಗುಪ್ಪೆಯ ಸಂಜನ (೧೫), ಸಂಜಯ್ (೧೮),ಕಮಲಮ್ಮ (೪೦) ರಕ್ಷಣೆಗೊಳಗಾದವರಾಗಿದ್ದು ,ಮುರುಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲೈಫ್ ಗಾರ್ಡ ನೇಮಕಕ್ಕೆ ಆಗ್ರಹ .

ಮುರುಡೇಶ್ವರದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಅತೀ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಾರೆ. ಸಮುದ್ರದಲ್ಲಿ ಮೋಜು ಮಸ್ತಿ ಮಾಡುವ ಇವರು, ಯಾವುದೇ ಸುರಕ್ಷಾ ಸಾಧನವಿಲ್ಲದೇ ಸಮುದ್ರಕ್ಕೆ ಇಳಿದು ಅಲೆಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುತಿದ್ದಾರೆ. ಕಳೆದ ನಾಲ್ಕು ತಿಂಗಳಿಂದ ಜಿಲ್ಲಾ ಪ್ರವಾಸೋಧ್ಯಮ ಇಲಾಖೆ ಈ ಭಾಗದಲ್ಲಿ ಲೈಫ್ ಗಾರ್ಡ ಗಳನ್ನು ನಿಯೋಜನೆ ಮಾಡಿಲ್ಲ. ಹೀಗಾಗಿ ಪ್ರವಾಸಕ್ಕೆ ಬಂದ ಜನರು ಸಮುದ್ರ ಪಾಲಾದಾಗ ರಕ್ಷಣೆ ಮಾಡುವುದೇ ಒಂದು ಸವಾಲಾಗಿದ್ದು , ಸ್ಥಳೀಯ ಮೀನುಗಾರರು ಹಾಗೂ ಅಡ್ವೇಂಚರ್ ಕಂಪನಿಯ ಕೆಲಸಗಾರರೇ ಲೈಪ್ ಗಾರ್ಡ ನಂತೆ ಪ್ರವಾಸಿಗರ ಜೀವ ರಕ್ಷಣೆ ಮಾಡುತಿದ್ದಾರೆ‌. ಹೀಗಾಗಿ ತಕ್ಷಣ ಜಿಲ್ಲೆಯ ಪ್ರಮುಖ ಕಡಲತೀರದಲ್ಲಿ ಲೈಪ್ ಗಾರ್ಡ ನೇಮಿಸಬೇಕೆಂದು ಈ ಸಂದರ್ಭದಲ್ಲಿ ಸ್ಥಳೀಯರು ಆಗ್ರಹಿಸಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!