ವಿದ್ಯುತ್ ಶಾರ್ಟ ಸರ್ಕ್ಯೂಟ್: ಕೇಬಲ್ ನೆಟ್ವರ್ಕ್ ಕಚೇರಿ ಸೇರಿ ಮೂರು ಮನೆಗಳು ಬೆಂಕಿಗಾಹುತಿ

46

ಕಾರವಾರ – ವಿದ್ಯುತ್ ಶಾರ್ಟ ಸರ್ಕ್ಯೂಟ್ ನಿಂದ ಅಗ್ನಿ (fire)ಅವಘಡ ಸಂಭವಿಸಿ ಮೂರು ಮನೆಗಳು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಸ್ತೂರಬಾ ನಗರದಲ್ಲಿ ನಡೆದಿದೆ.

ಶೇಖ್ ಅಹ್ಮದ್ ಎಂಬುವವರಿಗೆ ಸೇರಿದ ಮೂರು ಮನೆಗಳಾಗಿದ್ದು ಎರಡು ಮನೆಯನ್ನು ಬಾಡಿಗೆ ನೀಡಿದ್ದರು. ಬಾಡಿಗೆ ಮನೆಯಲ್ಲಿದ್ದ ಮಾರಿಕಾಂಬಾ ಡಿಜಿಟಲ್ ಕೇಬಲ್ ನೆಟ್ವರ್ಕ್ ನ ಸೆಟಪ್ ಬಾಕ್ಸ್ ಸೇರಿದಂತೆ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದ್ದು ಹತ್ತು ಲಕ್ಷಕ್ಕೂ ಹೆಚ್ಚು ಹಾನಿ ಸಂಭವಿಸಿದೆ.ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸಿದ್ದು ಶಿರಸಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!