Loksabha election2024:ಪ್ರಚಾರಕ್ಕೆ ಕರೆ ಕೊಟ್ಟ ವಿಶ್ವೇಶ್ವರ ಹೆಗಡೆ ಕಾಗೇರಿ-ಕಾರಣ ಏನು?

180

ಕಾರವಾರ:–ಉತ್ತರ ಕನ್ನಡ ಲೋಕಸಭಾ ಚುನಾವಣೆ (Loksabha election 2024) ಬಿಜೆಪಿಯಲ್ಲಿ ಟಿಕೆಟ್ ಪಡೆಯಲು ಪೈಪೋಟಿ ನಡುವೆಯೇ ಪಕ್ಷದಿಂದ ಟಿಕೇಟ್ ಆಕಾಂಕ್ಷಿಯಾಗಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರಾಮನ ಹೆಸರಿನಲ್ಲಿ ತಮ್ಮ ಬೆಂಬಲಿಗರಿಗೆ ಪ್ರಚಾರಕ್ಕೆ ಕರೆ ನೀಡುವ ಮೂಲಕ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ.

ಇದನ್ನೂ ಓದಿ:-ಭಟ್ಕಳದಲ್ಲಿ ರಂಗೇರಿದ ಜೂಜಾಟ:ರಾಜಕೀಯ ಮುಖಂಡರ ನೆರಳಲ್ಲಿ ಕಣ್ಣುಮುಚ್ಚಿ ಕುಳಿತ ಪೊಲೀಸರು!

ಬಿಜೆಪಿಗೆ ನೀವು ಮತ ಹಾಕಿದ್ರೆ ಅದು ರಾಮನಿಗೆ ಮತ ಹಾಕಿದಂತೆ,ಕೆನರಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕಮಲದ ಹೂ.ವ್ಯಕ್ತಿ ಯಾರೂ ಅಂತಾ ವರಿಷ್ಠರು ಸೂಕ್ತ ಸಮಯದಲ್ಲಿ ಘೋಷಣೆ ಮಾಡ್ತಾರೆ,ಕಳೆದ ಬಾರಿಗಿಂತಲೂ ದಾಖಲೆ ಮತಗಳಿಂದ ಈ ಬಾರಿ ನಮ್ಮ ಬಿಜೆಪಿ ಗೆಲ್ಲಲಿದೆ,ಕಳೆದ ಬಾರಿ 4 ಲಕ್ಷ 80 ಸಾವಿರ ಮತಗಳ ಅಂತರದಿಂದ ಈ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿತ್ತು,ಈ ಬಾರಿ ಆ ದಾಖಲೆಯನ್ನು ಮುರಿದು ಇನ್ನೊಂದು ದಾಖಲೆಯನ್ನ ನಾವು ಸೃಷ್ಟಿಸುತ್ತೆವೆ.

ನಮ್ಮ ಕಾರ್ಯಕರ್ತರು ಹಾಗೂ ಮತದಾರರಲ್ಲಿ ಮನವಿ ಮಾಡುತ್ತೆನೆ,ಬಿಜೆಪಿಗೆ ಮತ ಹಾಕಿದ್ರೆ ಅದು ರಾಮನಿಗೆ ಮತ ಹಾಕಿದಂತೆ, ನರೇಂದ್ರ ಮೋದಿಗೆ ಮತ ಹಾಕಿದಂತೆ,ಬಿಜೆಪಿಗೆ ಮತ ಹಾಕಿದ್ರೆ ಅದು ದೇಶದ ಐಕ್ಯತೆಗೆ ಮತ ಹಾಕಿದಂತೆ.ಎಂಬ ಸಂದೇಶದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸೋಣ ,ಎಲ್ಲರೂ ಮತದಾನ ಮಾಡುವಂತೆ ನಾವು ಮಾಡೋಣ ಎಂದು ಕಾರ್ಯರ್ತರು ಹಾಗೂ ಮುಖಂಡರಿಗೆ ಮನವಿ ಮಾಡಿದರು.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!