BREAKING NEWS
Search

ಕುಡಿದ ಮತ್ತಿನಲ್ಲಿ ಪೊಲೀಸರ ಮೇಲೆ ಹಲ್ಲೆ :ಯಲ್ಲಾಪುರ ಕಾಂಗ್ರೆಸ್ ಮಾಜಿ ಶಾಸಕ ಪುತ್ರನ ಬಂಧನ

88

ಕಾರವಾರ,:-ಕುಡಿದ ಮತ್ತಿನಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮತ್ತು ಹಣದ ವಂಚನೆಯ ಪ್ರಕರಣದಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ವಿ.ಎಸ್ ಪಾಟೀಲ್ ಪುತ್ರನನ್ನು ಬೆಂಗಳೂರಿನಲ್ಲಿ(bengaluru) ಶನಿವಾರ ರಾತ್ರಿ ಮುಂಡಗೋಡು ಪೊಲೀಸರು ಬಂಧಿಸಿದ್ದಾರೆ.

2011ರಲ್ಲಿ ಮುಂಡಗೋಡ (mundgodu) ಅರಣ್ಯ ಇಲಾಖೆಯ ಐಬಿಯಲ್ಲಿ ಕುಡಿದ ಮತ್ತಿನಲ್ಲಿ 15 ಜನರ ಜೊತೆ ಸೇರಿ ಎಎಸ್‌ಐ ಬಾಲಕೃಷ್ಣ ಪಾಲೇಕರ್
ಮೇಲೆ ಹಲ್ಲೆ ನಡೆಸಿದ್ದರು.

ಮಾಜಿ ಶಾಸಕ ವಿ.ಎಸ್ .ಪಾಟೀಲ್ ಪುತ್ರ.

ಇದಲ್ಲದೇ ಎರಡು ಚಕ್ ಬೌನ್ಸ್ ಪ್ರಕರಣ ಸೇರಿ ಬಾಪು ಗೌಡ ಪಾಟೀಲ್ ವಿರುದ್ಧ ಸೆಕ್ಷನ್ 353, 141,143, 147, 323, 353, 504, 506,149ನಡಿ ಪ್ರಕರಣ ಸಹ ದಾಖಲಾಗಿತ್ತು.

ಕೋರ್ಟಗೆ ಹಾಜುರಾಗದೇ ಕಳೆದ ಆರು ತಿಂಗಳಿಂದ ತಲೆಮರಿಸಿಕೊಂಡಿದ್ದ ಬಾಪುಗೌಡ ಪಾಟೀಲ್ ನನ್ನು ಮುಂಡಗೋಡು ಪೊಲೀಸರು ಶನಿವಾರ ತಡರಾತ್ರಿ ಬೆಂಗಳೂರಿನಲ್ಲಿ ಬಂಧಿಸಿ ಮುಂಜಾನೆ ಮುಂಡಗೋಡಿನಲ್ಲಿ ನ್ಯಾಯಾಧೀಶರ ಮುಂದೆ ಹಾಜುರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿ ಶಿರಸಿ ಸಬ್ ಜೈಲಿಗೆ ಕಳುಹಿಸಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!