ಉತ್ತರ ಕನ್ನಡ Loksabha election 2024 | ಎಷ್ಟು ಜನ ಚುನಾವಣ ಕಣದಲ್ಲಿ, ವಿವರ ನೋಡಿ.

108

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದಲ್ಲಿ ( Uttara Kannada Lok Sabha constituency) ಸೋಮವಾರ ನಾಮಪತ್ರ ಹಿಂಪಡೆಯಲು ಕೊನೆದಿನವಾಗಿದ್ದು ,ಯಾವೊಬ್ಬ ಅಭ್ಯರ್ಥಿಗಳು ಸಹ ನಾಮಪತ್ರ ಹಿಂಪಡೆಯದ ಕಾರಣ ಒಟ್ಟು 13 ಅಭ್ಯರ್ಥಿಗಳು ಕಣದಲ್ಲಿರಲಿದ್ದಾರೆ.

ಒಟ್ಟು 17 ನಾಮಪತ್ರಗಳು ತಿರಸ್ಕೃತಗೊಂಡಿದ್ದು, ನಾಮಪತ್ರಗಳ ಪರಿಶೀಲನೆಯ ನಂತರ 13 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿವೆ.

ರಾಷ್ಟಿಯ ಜನ ಸಂಭಾವನಾ ಪಕ್ಷದ ನಾಗರಾಜ ಶ್ರೀಧರ್ ಶೇಟ್, ಪಕ್ಷೇತರ ಆಭ್ಯರ್ಥಿಗಳಾದ ರೂಪಾ ನಾಯ್ಕ್, ಉಮೇಶ್ ದೈವಜ್ಞ, ಮಡಗಾಂವಕರ್ ಪ್ರಮೋದ್, ಸುಜಯ್ ಸುಧೀರ್ ಗೋಕರ್ಣ ಮತ್ತು ಪ್ರಕಾಶ್ ಪಿಂಟೋ ಅವರ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಕಾಂಗ್ರೆಸ್ ನ (congress). ಡಾ.ಅಂಜಲಿ ನಿಂಬಾಳ್ಕರ್, ಭಾರತೀಯ ಜನತಾ ಪಾರ್ಟಿಯ (bjp)ಕಾಗೇರಿ ವಿಶ್ವೇಶ್ವರ ಹೆಗಡೆ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದ ಗಣಪತಿ ಹೆಗಡೆ, ಕರ್ನಾಟಕ ರಾಷ್ಟ ಸಮಿತಿಯ ವಿನಾಯಕ ಮಂಗೇಶ ನಾಯ್ಕ್, ಉತ್ತಮ ಪ್ರಜಾಕೀಯ ಪಕ್ಷದ ಸುನೀಲ್ ಪವಾರ್, ಪಕ್ಷೇತರ ಅಭ್ಯರ್ಥಿಗಳಾದ ಕೃಷ್ಣಾಜಿ ಪಾಟೀಲ್, ಚಿದಾನಂದ ಹನುಮಂತಪ್ಪ ಹರಿಜನ, ನಿರಂಜನ್ ಉದಯಸಿನ್ಹಾ ಸರ್‌ದೇಸಾಯಿ, ನಾಗರಾಜ ಅನಂತ ಶಿರಾಲಿ, ಅರವಿಂದ ಗೌಡ, ಅವಿನಾಶ್ ನಾರಾಯಣ ಪಾಟೀಲ, ಕೃಷ್ಣ ಹನುಮಂತಪ್ಪ ಬಳೆಗಾರ, ರಾಜಶೇಖರ ಶಂಕರ ಹಿಂಡಲಗಿ ಅಭ್ಯರ್ಥಿಗಳು ಕಣದಲ್ಲಿರಲಿದ್ದಾರೆ .

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೆ.7 ರಂದು ಚುನಾವಣೆ ನಡೆಯಲಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!