Karnataka Rain news:- ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಆದರೆ ಕರ್ನಾಟಕದಲ್ಲಿ (karnataka )ಐದು ದಿನ ಸಾಧಾರಣ ಮಳೆಯಾಗಲಿದ್ದು, ಮುಂಗಾರು ಇನ್ನಷ್ಟು ವ್ಯಾಪಿಸಲು ಪರಿಸ್ಥಿತಿ ಅನುಕೂಲಕರವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಎಲ್ಲಿ ಮಳೆ.
ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಮೇ 23, 24ರಂದು ಮತ್ತು ಮೈಸೂರಿನಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ:-Kannadavani impact| ಕುಮಟಾ, ಗೋಕರ್ಣದಲ್ಲಿ ಪ್ರವಾಸಿ ಬೋಡ್ ಗಳಿಗೆ ನಿರ್ಬಂಧ
ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮೇ 27ರವರೆಗೆ ಸಾಧಾರಣ ಮಳೆಯಾಗಲಿದೆ. ಇನ್ನು ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮುಂಗಾರು ವ್ಯಾಪಕಗೊಳ್ಳಲು ಅನುಕೂಲಕರ ವಾತಾವರಣ ಇದ್ದು ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಮಾನ್ಸೂನ್ ಮತ್ತಷ್ಟು ವ್ಯಾಪಿಸಲಿದೆ.
ಈ ವಾರಾಂತ್ಯದಲ್ಲಿ ಕೇರಳ ಪ್ರವೇಶಿಸಲಿದೆ. ಆದಾಗಿ ಎರಡ್ಮೂರು ದಿನದಲ್ಲಿ ಮುಂಗಾರು ರಾಜ್ಯ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:-ಮುಂಗಾರು ಮಳೆಯ ದಿನಾಂಕ ಪ್ರಕಟಿಸಿದ ಹವಾಮಾನ ಇಲಾಖೆ|ಯಾವಾಗ ವಿವರ ನೋಡಿ.
ಸದ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಆದರೆ ಇದು ಮುಂಗಾರಿನ ಮೇಲೆ ಯಾವುದೆ ಪರಿಣಾಮ ಉಂಟು ಮಾಡುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಜೊತೆ ಮೋಡ ಕವಿದ ವಾತಾವರಣ ಇರಲಿದೆ. ಇದಲ್ಲದೇ ಉಷ್ಣಾಂಶದಲ್ಲಿ ಸಹ ಇಳಿಕೆ ಕಾಣಲಿದೆ.
