CM ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರಿಗೆ ನ್ಯಾಯಾಲಯದಿಂದ ದಂಡ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಹೈಕೋರ್ಟ್ ಸೂಚನೆ?

162

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ,( Chief Minister Siddaramaiah) ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, (M.B.pattil) ರಾಮಲಿಂಗಾರೆಡ್ಡಿ (Ramalingareddy )ಹಾಗೂ ಕಾಂಗ್ರೆಸ್(congress) ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು,

ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮಾರ್ಚ್ 7 ರಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, 11 ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆರ್. ಎಸ್ ಸುರ್ಜೇವಾಲಾ ಮತ್ತು ಮಾರ್ಚ್ 15 ರಂದು ಭಾರೀ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ(court) ಖುದ್ದು ಹಾಜರಾಗುವಂತೆ ಸೂಚಿಸಿದೆ.

ಕೋರ್ಟ್ ದಂಡ ಹಾಕಿದ್ದು ಏಕೆ?

ಕಳೆದ ಬಿಜೆಪಿ (BJP) ಸರ್ಕಾರ ಇದ್ದ ಸಂದರ್ಭದಲ್ಲಿ
ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸಕ್ಕೆ ಕಾನೂನು ಬಾಹಿರವಾಗಿ ಪಾದಯಾತ್ರೆ ನಡೆಸಿದ ಆರೋಪದ ಮೇಲೆ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠ ವಜಾಗೊಳಿಸಿದೆ.

ನಗರ ಜೀವನ ಈಗಾಗಲೇ ಚಿತ್ರಹಿಂಸೆಯಾಗಿರುವಾಗ ಪ್ರತಿನಿಧಿಗಳು ನಿಯಮವನ್ನು ಅನುಸರಿಸದಿದ್ದರೆ ಮತ್ತು ರಸ್ತೆಗಳನ್ನು ನಿರ್ಬಂಧಿಸಿದರೆ ಏನಾಗುತ್ತದೆ? ಪ್ರತಿನಿಧಿಗಳು ಮೊದಲು ನಿಯಮವನ್ನು ಅನುಸರಿಸಬೇಕು ಎಂದು ಹೈಕೋರ್ಟ್ ತಾಕೀತು ಮಾಡಿತು.

ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್ ಈಶ್ವರಪ್ಪ ಅವರನ್ನು ಬಂಧಿಸುವಂತೆ ಒತ್ತಾಯಿಸಿ 2022 ರ ಏಪ್ರಿಲ್‌ನಲ್ಲಿ ಈಗಿನ ಸಿಎಂ ಸೇರಿದಂತೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೋರ್ಟ ದಂಡ ವಿಧಿಸಿದೆ.

ಇದನ್ನೂ ಓದಿ:-Sirsi:ಹರಕೆ ಈಡೇರಿಸುವಂತೆ ಶಿವಲಿಂಗದ ಮೇಲೇ ಕೋರಿಕೆ ಬರೆದ ವಿದ್ಯಾರ್ಥಿ!
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!