ದೇವೇಗೌಡರ ಮನೆಯಲ್ಲಿ ಬಂಧನಕೊಳಗಾದ ರೇವಣ್ಣ| ಬಂಧನಕ್ಕೆ ಕಾರಣಗಳಿವು.

96

ಬೆಂಗಳೂರು:- ಹಲವು ದಿನದಿಂದ ಸದ್ದು ಮಾಡುತಿದ್ದ
ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್‌ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ಸಿಕ್ಕಿದೆ.

ಪೆನ್ ಡ್ರೈವ (pen drive )ವಿಡಿಯೊದಲ್ಲಿ ಇದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಇಂದು ಸಂಜೆ ಬಂಧಿಸಿದ್ದಾರೆ‌.

ಮಾಜಿ ಪ್ರಧಾನಿ ( former Prime Minister) ಆಗಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರ ಪದ್ಮನಾಭನಗರದ ಮನೆಯಲ್ಲಿಯೇ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:-ಸಂಘ ಪರಿವಾರಕ್ಕೆ ಸಾಲಕೊಟ್ಟ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬಳಿ ಇರುವ ಆಸ್ತಿ ಎಷ್ಟು?

ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ ಎನ್ನಲಾದ ಸಂತ್ರಸ್ತೆಯನ್ನು ರೇವಣ್ಣ ಹಾಗೂ ಇತರರು ಅಪಹರಣ ಮಾಡಿದ್ದರು. ಈ ಮೂಲಕ ಸಂತ್ರಸ್ತೆಯನ್ನು ಬೆದರಿಸಲು ಯತ್ನಿಸಿದ್ದರು. ಇದೇ ಕಾರಣಕ್ಕೆ ರೇವಣ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನಂತರ SIT ಅಧಿಕಾರಿಗಳು ನ್ಯಾಯಾಧೀಶರ ಎದುರು ಹಾಜರುಪಡಿಸಲಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!