Sirsi havyak girl Miss World 2024

SIRSI | 2024 ರವಿಶ್ವ ಸುಂದರಿ ಪಟ್ಟಕ್ಕೇರಿದ ಡಾ.ಶೃತಿ ಹೆಗಡೆ

232

SIRSI NEWS:-ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಹುಬ್ಬಳ್ಳಿಯ ಯುವತಿಯೊಬ್ಬಳು ಇತ್ತೀಚಿಗೆ ಅಮೇರಿಕಾದಲ್ಲಿ (America )ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತಳಾಗಿದ್ದಾಳೆ.

ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ ಅಮೇರಿಕಾದಲ್ಲಿ ವಿಶ್ವ ಸುಂದರಿಯಾಗಿ ( Miss World 2024 )ಹೊರಹೊಮ್ಮಿದ್ದಾಳೆ.

ಈಕೆ ಈ ಮೊದಲು 2018 ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದಳು. 2023 ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಈಕೆ ಅಮೇರಿಕಾದಲ್ಲಿ ನಡೆದ ವಿಶ್ವ ಸುಂದರಿ ಕಿರೀಣ ಮುಡಿಗೇರಿಸಿಕೊಂಡಿದ್ದಾಳೆ.

ಅಮೇರಿಕಾದ ಪ್ಲೋರಿಡಾದಲ್ಲಿ ಕಳೆದ ಜೂ.6 ರಿಂದ 10ರ ವರೆಗೆ ಆಯೋಜಿತವಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟೂ 40 ದೇಶಗಳ ಸುಂದರಿಯವರು ಪೈಪೋಟಿಯಲ್ಲಿದ್ದರು.

ರಾಷ್ಟ್ರೀಯ ಉಡುಗೆ, ಈಜು ಉಡುಗೆ, ಪ್ರಶ್ನೋತ್ತರ, ವಯಕ್ತಿಕ ಸಂದರ್ಶನ ಮುಂತಾದ ವಿವಿಧ ಸುತ್ತುಗಳಲ್ಲಿ ಸ್ಪರ್ಧೆ ಸಾಗಿತ್ತು. ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿ, ಶೃತಿ ಹೆಗಡೆ ಗೆಲುವು ಸಾಧಿಸಿದ್ದಾರೆ.‌

ಇದನ್ನೂ ಓದಿ:-Kumta: ನೇಸರ ರೆಸಾರ್ಟ ಮೇಲೆ ದಾಳಿ ವೇಷ್ಯಾ ವಾಟಿಕೆ ನಡೆಸುತಿದ್ದ ಇಬ್ಬರ ಬಂಧನ-ಮೂವರು ಯುವತಿಯರ ರಕ್ಷಣೆ

ಹುಬ್ಬಳ್ಳಿಯಲ್ಲಿಯೇ ಎಮ್.ಬಿ.ಬಿ.ಎಸ್. ಪೂರೈಸಿರುವ ಡಾ.ಶೃತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ ಹಂಬಲದಿಂದ ತುಮಕೂರಿನಲ್ಲಿ ಎಮ್.ಡಿ. ಅಧ್ಯಯನ ನಡೆಸುತ್ತಿದ್ದಾರೆ. ಈಕೆ ಭರತನಾಟ್ಯ ಕಲಾವಿದೆಯೂ ಆಗಿದ್ದು, ದುಬೈ, ಮಾಲ್ಡೀವ್ಸ, ಭೂತಾನ್ ಮುಂತಾದ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾಳೆ.ಕೆಲವು ಧಾರವಾಹಿ, ಕನ್ನಡ ಚಲನಚಿತ್ರ, ವೆಬ್ ಸಿರೀಸ್ ನಲ್ಲಿ ನಟಿಸಿದ್ದಾಳೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!