DC Uttrakannada Laxmipriya

ಉತ್ತರ ಕನ್ನಡ ಮಳೆ ಇಳಿಕೆ | ಎಷ್ಟು ಹಾನಿ ವಿವರ ನೋಡಿ

30

WWW.KANNADAVANI. NEWS| 10 JULY 2024

Rain Damage News:- ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಧವಾರದಂದು ಮಳೆ (Rain) ಕಡಿಮೆಯಾಗಿದೆ. ಹೊನ್ನಾವರ ತಾಲ್ಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದ ಎಲ್ಲಾ ಸಂತ್ರಸ್ಥರು ತಮ್ಮ ಮನೆಗಳಿಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

 ಕಳೆದ 24 ಗಂಟೆಗಳಲ್ಲಿ 2 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಜೂನ್ 1 ರಿಂದ ಇದುವರೆಗೆ ಮಳೆಯಿಂದಾಗಿ 1 ಮಾನವ ಜೀವಹಾನಿ, 8 ಮನೆಗಳು ಸಂಪೂರ್ಣ ಹಾನಿ, 18 ಮನೆಗಳು ತೀವ್ರ ಹಾನಿ, 119 ಮನೆಗಳಿಗೆ ಭಾಗಶಃ ಹಾನಿ ಹಾಗೂ 2 ಜಾನುವಾರು ಸಾವು ಸಂಭವಿಸಿದೆ. 830 ಮನೆಗಳು ನೀರಿನಿಂದ ಜಲಾವೃತ್ತವಾಗಿದ್ದು, 809 ಜನರಿಗೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ನೀಡಲಾಗಿತ್ತು.

ಇದನ್ನೂ ಓದಿ:-Uttrakannada Mansoon| ಈ ವಾರ ಮಳೆ ಹೇಗಿರಲಿದೆ? ವಿವರ ನೋಡಿ.

ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ಮಾನವ ಜೀವ ಹಾನಿಯಾಗದಂತೆ ಎಲ್ಲಾ ರೀತಿಯ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ರವರು ಸೂಚಿಸಿದ್ದಾರೆ.

ಸಾರ್ವಜನಿಕರು ಯಾವುದೇ ಸಮಸ್ಯೆಗಳಲ್ಲಿ ಜಿಲ್ಲಾಡಳಿತದ ಉಚಿತ ತುರ್ತು ಸಹಾಯವಾಣಿ ಸಂಖ್ಯೆ 1077 ಗೆ ಹಾಗೂ ಮೊ.ಸಂ. ಸಂಖ್ಯೆ 94835 11015 ಕರೆ , ಮೆಸೇಜ್, ವಾಟ್ಸಾಪ್ ಸಂದೇಶ ಮತ್ತು ವಾಟ್ಸಾಪ್ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!