ಉತ್ತರ ಕನ್ನಡ| ಮಳೆ ಅಬ್ಬರಕ್ಕೆ ಮುಳುಗಿದ ಬೋಟ್-ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ ವಿವರ ನೋಡಿ.

168

ಕಾರವಾರ – ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಅಬ್ಬರದ ಗಾಳಿ ಜೊತೆ ಗುಡುಗು ಸಹಿತ ಮಳೆ ಸುರಿಯುತಿದ್ದು ಭಟ್ಕಳದಲ್ಲಿ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಓಂ ಗಣೇಶ್ ಹೆಸರಿನ ಮಹಾದೇವ ಖಾರ್ವಿ ಎಂಬುವವರಿಗೆ ಸೇರಿದ ಬೋಟ್ ಮುಳುಗಡೆಯಾಗಿದ್ದು ಬೋಟ್ ನಲ್ಲಿದ್ದ ನಾಲ್ಕು ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.ಬೋಟ್ ಮುಳುಡೆಯಿಂದ ಲಕ್ಷಾಂತರ ರುಪಾಯಿ ಹಾನಿ ಸಂಭವಿಸಿದೆ.

ಕರಾವಳಿ ಭಾಗದ ಕಾರವಾರ,ಅಂಕೋಲ, ಕುಮಟಾ, ಭಟ್ಕಳ ಭಾಗದಲ್ಲಿ ಗುಡುಗು ಸಹಿತ ಮಳೆ ಪ್ರಾರಂಭವಾಗಿದ್ದು ಬಿಸಿಲಿನ ಅಬ್ಬರಕ್ಕೆ ಇದೇ ಮೊದಲಬಾರಿಗೆ ವರುಣ ಕರಾವಳಿ ಭಾಗದಲ್ಲಿ ತಂಪೆರೆದಿದ್ದಾನೆ.

ಬಿಸಿಲಿನ ತಾಪಕ್ಕೆ ಕಂಗೆಟ್ಟಿದ್ದ ಬೆಂಗಳೂರು(Bangalore) ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ(Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!