Yallpura ಪ್ರಸಿದ್ಧ ಸಾತೋಡ್ಡಿ ಜಲಪಾತಕ್ಕೆ ಪ್ರವಾಸಿಗರಿಗೆ ನಿಷೇಧ

175

ಕಾರವಾರ :- ಜಲಪಾತ ವೀಕ್ಷಣೆಗೆ ತೆರಳಿದ್ದ ಪ್ರವಾಸಿಗರ ಮೇಲೆ ನಿರಂತರ ಜೇನು ದಾಳಿ ಮಾಡುತ್ತಿರುವ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪ್ರಸಿದ್ಧ ಸಾತೊಡ್ಡಿ ಜಲಪಾತದಲ್ಲಿ ಪ್ರವೇಶಕ್ಕೆ ಅರಣ್ಯ ಇಲಾಖೆ ನಿರ್ಬಂಧ ಹೇರಿದೆ.

ಕೆಳೆದ ಎರಡು ದಿನಗಳಲ್ಲಿ 30ಕ್ಕೂ ಅಧಿಕ ಪ್ರವಾಸಿಗರಿಗೆ ಜೇನು ದಾಳಿ ಮಾಡಿದ್ದು ಇಂದು ಜೇನು ಕಡಿತಕ್ಕೆ ಒಳಗಾದ ಗಂಭೀರ ಗಾಯಗೊಂಡಿದ್ದ ನಾಲ್ವರು ಪ್ರವಾಸಿಗರಿಗೆ ಹುಬ್ಬಳ್ಳಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬೇಸಿಗೆ ರಜೆ ಹಿನ್ನಲೆಯಲ್ಲಿ ನೀರಲ್ಲಿ ಆಟವಾಡಲು ಸಾತೊಡ್ಡಿ ಪಾಲ್ಸದ (sathodi falls )ಗೆ ಹೆಚ್ಚು ಪ್ರವಾಸಿಗರು ಭೇಟಿ ನೀಡುತಿದ್ದು ಜಲಪಾತದ ಬಳಿಯೇ ಪ್ರವಾಸಿಗರ ಮೇಲೆ ಜೇನುಹುಳಗಳು ನಿರಂತರ ದಾಳಿ ಮಾಡುತ್ತಿದೆ.

ಜೇನುಹುಳುಗಳ (bee attack) ದಾಳಿ ಹಿನ್ನಲೆ ಜಲಪಾತ ವೀಕ್ಷಣೆಗೆ ಅರಣ್ಯ ಇಲಾಖೆಗೆ ಇಂದಿನಿಂದ ನಿರ್ಭಂದ ಹೇರಿ ಬಿಸಗೋಡ ಕ್ರಾಸ್‌ನಲ್ಲಿ ಬ್ಯಾನರ್ ಅಳವಡಿಸಿ ಪ್ರವಾಸಿಗರಿಗೆ ಸೂಚನೆ ನೀಡಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!