UTTARAKANNDA | ಕೋರ್ಟ ನಲ್ಲಿ ಉದ್ಯೋಗಾವಕಾಶ ವಿವರ ನೋಡಿ.

122

UTTARAKANNADA JOBS :– ಉತ್ತರ ಕನ್ನಡ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ, ಕಾರವಾರ ವಿವಿಧ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 19/7/2024 ರಾತ್ರಿ 11.59.

ಉತ್ತರ ಕನ್ನಡ ಕಾರವಾರ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರ ವೃಂದದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು ನೇಮಕಾತಿ ಅಧಿಸೂಚನೆ ಹೊರಡಿಸಿದೆ.

ಒಟ್ಟು 3 ಬೆರಳಚ್ಚುಗಾರ (Typist) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್‌ಲೈನ್‌ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ 21,400-42,000 ರೂ. ಹಾಗೂ ಲಭ್ಯವಿರುವ ಇತರ ಭತ್ಯೆಗಳು ಒಳಗೊಂಡಿದೆ.

ವಿದ್ಯಾರ್ಹತೆ ಏನು?

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಕಮರ್ಷಿಯಲ್ ಪ್ರಾಕ್ಟೀಸ್‌ನಲ್ಲಿ ಮೂರು ವರ್ಷಗಳ ಡಿಪ್ಲೋಮಾ (Three years Diploma in Commercial Practice) ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗಾಗಿ ಹೊಂದಿರಬೇಕು.

ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಪ್ರೌಢದರ್ಜೆ ಬೆರಳಚ್ಚು (Senior Grade Typewriting) ಪರೀಕ್ಷೆಯಲ್ಲಿ ಅಥವಾ ಸೆಕ್ರೆಟರಿಯಲ್ ಪ್ರಾಕ್ಟೀಸ್ ಡಿಪ್ಲೋಮಾ (Diploma in Secretarial Practice) ಪರೀಕ್ಷೆಯಲ್ಲಿ ಉತ್ತಿರರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗಾಗಿ ಹೊಂದಿರಬೇಕು.

ಕಛೇರಿ ಕಾರ್ಯಕಲಾಪಗಳಿಗೆ ಸಂಬಂಧಿಸಿದಂತೆ ಗಣಕಯಂತ್ರದ (ಕಂಪ್ಯೂಟರ್) ಜ್ಞಾನ ಅವಶ್ಯಕವಾಗಿರುತ್ತದೆ.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ ಮೀರಿರಬಾರದು. ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ 35 ವರ್ಷಗಳು. ಪ್ರವರ್ಗ 2ಎ, 3ಎ ಹಾಗೂ 3 ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಇದನ್ನೂ ಓದಿ:-NIA ದಾಳಿ| ಶಿರಸಿಯ ಅಬ್ದುಲ್ ಶುಕ್ಕೂರ್ ಮೇಲಿರುವ ಆರೋಪ ಏನು ಗೊತ್ತಾ?

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಶುಲ್ಕ ಪಾವತಿ ಮಾಡದ ಅರ್ಜಿಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕಾರ ಮಾಡಲಾಗುತ್ತದೆ. ಅರ್ಜಿ ಶುಲ್ಕ ಪಾವತಿ ಮಾಡಲು 20/7/2024 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಕೆ ಮಾಡುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 300 ರೂ., ಪ್ರವರ್ಗ 2ಎ, 2 ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 150 ರೂ.ಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಕೆ ಮಾಡಿದ ಅಭ್ಯರ್ಥಿಗಳ ಆಯ್ಕೆಯು ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) ನಿಯಮಗಳು 1982 ಮತ್ತು ತಿದ್ದುಪಡಿ ನಿಯಮಗಳು 2007 ಹಾಗೂ 2021ರ ಅನ್ವಯ ನಡೆಸಲಾಗುತ್ತದೆ.

ಇದನ್ನೂ ಓದಿ:-Weekly horoscope |ವಾರ ಭವಿಷ್ಯ-JUNE 16 ರಿಂದ 22 JUNE

ಅಭ್ಯರ್ಥಿಯು ಶೈಕ್ಷಣಿಕ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಗಣಕಯಂತ್ರದಲ್ಲಿ (ಕಂಪ್ಯೂಟರ್) ಬೆರಳಚ್ಚು ಮಾಡುವ ಕೌಶಲ್ಯ ಪರೀಕ್ಷೆಯಲ್ಲಿ ಗಳಿಸುವ ಶೇಕಡವಾರು ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನ ನಡೆಸಲಾಗುವದು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಹತಾ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಒಳಗೊಂಡಿದ್ದು, ತೇರ್ಗಡೆಯಾಗಲು ಕನಿಷ್ಠ 50 ಅಂಕಗಳನ್ನು ಪಡೆಯಬೇಕು ಮತ್ತು ಸಂದರ್ಶನ 5 ಅಂಕಗಳನ್ನು ಒಳಗೊಂಡಿದ್ದು ಕನಿಷ್ಠ 2 ಅಂಕವನ್ನು ಪಡೆದ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆಗೆ ಪರಿಗಣಿಸಲಾಗುವದು.

ಅರ್ಜಿ ಸಲ್ಲಿಸಲು ಈ ಲಿಂಕ್ ಗೆ ಕ್ಲಿಕ್ ಮಾಡಿ:-
https://uttarakannada.dcourts.gov.in/online-recruitment




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!