ರಾಜ್ಯದಲ್ಲಿ ಎರಡು ದಿನ ವ್ಯಾಪಕ ಮಳೆ| ಉತ್ತರ ಕನ್ನಡ ಯಲ್ಲೂ ಅಲರ್ಡ

85

ಕಾರವಾರ : ರಾಜ್ಯದಲ್ಲಿ ಎರಡು ದಿನ ವ್ಯಾಪಕ ಮಳೆಯಾಗಲಿದ್ದು,ಹವಾಮಾನ ( weather) ಇಲಾಖೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೊಹಾಗೂ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ನೀಡಿದೆ.

ಏ.21ರಂದು ಕರಾವಳಿ (karavali) ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ.

ಉಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿಗುಡುಗು- ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಆರೇಂಜ್‌ ಅಲರ್ಟ್‌ ನೀಡಿದೆ.

ಏ.22ರಂದು ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊಅಲರ್ಟ್‌ ನೀಡಲಾಗಿದೆ.

ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕ ಮಳೆಯಿಂದ ಹಲವು ಕಡೆ ಹಾನಿಯಾಗಿದೆ.ಉತ್ತರಕನ್ನಡ ,ಹುಬ್ಬಳ್ಳಿ ಭಾಗದಲ್ಲಿ ಮಳೆ ಸುರಿದರೂ ಹೆಚ್ಚಿನ ಅನಾಹುತ ಸೃಷ್ಟಿಯಾಗಿಲ್ಲ. ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಕರಾವಳಿಯಲ್ಲಿ ವಾತಾವರಣದಲ್ಲಿ ಸಹ ಬದಲಾವಣೆ ಆಗಲಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!