BREAKING NEWS
Search

Weather report|ಕರ್ನಾಟಕದ ಹಲವು ಪ್ರದೇಶದಲ್ಲಿ ಇಂದು ಮಳೆ

85

Bangalore :- ಮುಂದಿನ ಕೆಲವು ದಿನಗಳ ಕಾಲ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಅರಬ್ಬಿ ಸಮುದ್ರದ ಮೇಲೆ ಕಡಿಮೆ ಒತ್ತಡದ ಹವಾಮಾನ ಅಸ್ತಿತ್ವದಲ್ಲಿದೆ. ಇದರ ಪ್ರಭಾವದಿಂದ ಮುಂದಿನ ನಾಲ್ಕು ದಿನಗಳ ಕಾಲ ಕೇರಳದಲ್ಲಿ ಭಾರೀ ಮಳೆ ಸುರಿಯಲಿದೆ. ಕೇರಳ ಹಾಗೂ ಲಕ್ಷದ್ವೀಪದಲ್ಲಿ ಕರಾವಳಿಗೆ ತೆರಳದಂತೆ ಜನರಿಗೆ ಐಎಂಡಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸಮುದ್ರದ ಪ್ರಕ್ಷುಬ್ಧತೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ:- Bjp ರಾಜ್ಯಾಧ್ಯಕ್ಷರ ಭೇಟಿ ಮಾಡಿದ ಸಂಸದ ಅನಂತಕುಮಾರ್ ಹೆಗಡೆ.

ಇನ್ನು ಹವಾಮಾನ ವೈಪರಿತ್ಯ ಕರ್ನಾಟಕ ಕರಾವಳಿಯಮೇಲೂ ಪ್ರಭಾವ ಬೀರಿದ್ದು ಕರ್ನಾಟಕದ ಕರಾವಳಿ ಸೇರಿದಂತೆ ಪಶ್ಚಿಮ ಘಟ್ಟ ಭಾಗದಲ್ಲೂ ಹಗುರ ಮಳೆಯಾಗಲಿದೆ‌

ಭಾರತ ಹವಾಮಾನ ಇಲಾಖೆ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮೋಡಕವಿದ ವಾತಾವರಣದ ಜೊತೆ ಅಲ್ಪ ಮಳೆಯಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ:-ಈ ಕಾರಣಕ್ಕೆ ಬಿಕೆ ಹರಿಪ್ರಸಾದ್ ಬಂಧಿಸಬೇಕು? ಮಾಜಿ ಶಾಸಕ ಸುನೀಲ್ ಹೆಗಡೆ ಕೊಟ್ಟ. ಸಾಕ್ಷಿಗಳೇನು ಓದಿ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!