Former mp ananthkumar hegde house fire

ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಗೆ ಬೆಂಕಿ-ವಿವರ ನೋಡಿ.

119

ಕಾರವಾರ:- ಮಾಜಿ ಸಂಸದ ಅನಂತಕುಮಾರ್ ಹೆಗಡೆ (Ananthkumar hegde) ಮನೆಗೆ ವಿದ್ಯುತ್ ಶಾರ್ಟ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿ ಮನೆಯ ಮೇಲ್ಭಾಗದ ಚಾವಣಿಯ ಚಿಮ್ ಮಾಡುವ ಕೊಠಡಿಯ ವಸ್ತುಗಳು ಸುಟ್ಟುಹೋದ ಘಟನೆ ಇಂದು ಮುಂಜಾನೆ ನಡೆದಿದೆ.

ಶಿರಸಿಯ KHB ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಿದ್ದು
ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ ಸರ್ಕ್ಯೂಟ್ ನಿಂದ ಬೆಂಕಿಯಾದ ಪರಿಣಾಮ ಚಿಮ್ ಮಾಡುವ ಯಂತ್ರಗಳಿಗೆ ಅಲ್ಪ ಹಾನಿಯಾಗಿದೆ. ಇದನ್ನು ಹೊರತುಪಡಿಸಿದರೇ ಹೊಗೆಯಿಂದ ಗೋಡೆಗಳಿಗೆ ಹಾನಿಯಾಗಿದ್ದು ಅಂದಾಜು 50 ಸಾವಿರದಷ್ಟು ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ
ಬೆಂಕಿ ನಂದಿಸಿದ್ದು ಯಾವುದೇ ದೊಡ್ಡ ಹಾನಿಯಾಗಿಲ್ಲ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸುನೀಲ್ ರವರು ಮಾಹಿತಿ ನೀಡಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!