Elephant camp | ಪನ್ಸೋಲಿ ಆನೆ ಬಿಡಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ದುಬಾರೆ ಆನೆ ಬಿಡಾರ ದುರಂತದ ಬೆನ್ನಲ್ಲೇ ಜೋಯಿಡಾ ತಾಲೂಕಿನ ಪನ್ಸೋಲಿ ಆನೆ ಬಿಡಾರಕ್ಕೆ ಸಾರ್ವಜನಿಕ ಪ್ರವೇಶ ಹಾಗೂ ಆನೆ ವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.
ಜೋಯಿಡಾ ತಾಲೂಕಿನ ಪನ್ಸೋಲಿ ಆನೆ ಬಿಡಾರದಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯ ಪ್ರತಿಕಾತ್ಮಕ ಚಿತ್ರ ಜೋಯಿಡಾ ತಾಲೂಕಿನ ಪನ್ಸೋಲಿ ಆನೆ ಬಿಡಾರದಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಹಿನ್ನೆಲೆಯ ಪ್ರತಿಕಾತ್ಮಕ ಚಿತ್ರ
ಪನ್ಸೋಲಿ ಆನೆ ಬಿಡಾರ

Elephant camp | ಪನ್ಸೋಲಿ ಆನೆ ಬಿಡಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಕಾರವಾರ/ಜೋಯಿಡಾ:- ದುಬಾರೆ ಆನೆ ಬಿಡಾರದಲ್ಲಿ ಆನೆ ಕಾಳಗದಿಂದ ಮಹಿಳೆ ಹಾಗೂ ಆನೆ ಸಾವುಕಂಡ ದುರ್ಘಟನೆ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ (joida)ತಾಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಪನ್ಸೋಲಿ ಆನೆ ಬಿಡಾರಕ್ಕೆ ಸಾರ್ವಜನಿಕ ಪ್ರವೇಶ ಹಾಗೂ ಆನೆಗಳ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ.ಮುಂದಿನ ಆದೇಶ ಬರುವ ವರೆಗೂ ಸಾರ್ವಜನಿಕರಿಗೆ ಆನೆ ವೀಕ್ಷಣೆ ಗೆ ನಿರ್ಬಂಧ ಮುಂದುವರೆಯಲಿದೆ ಎಂದು ಕಾಳಿ ಹುಲಿ ರಕ್ಷಿತ ಪ್ರದೇಶದ ಆರ್.ಎಫ್.ಓ ರವಿ ರವರು ಮಾಹಿತಿ ನೀಡಿದ್ದಾರೆ.

Dandeli-joida -ಪ್ರತ್ತೇಕ ಅಪಘಾತ ಅತೀ ವೇಗ ತಂತು ಪ್ರಾಣಕ್ಕೆ ಕುತ್ತು!

Advertisement

ಪನ್ಸೋಲಿಯ ಆನೆ ಬಿಡಾರದಲ್ಲಿ ಒಟ್ಟು ಐದು ಆನೆಗಳಿದ್ದು ಆನೆ ವೀಕ್ಷಣೆಗಾಗಿ ಪ್ರವಾಸಿಗರಿಗೆ ಅವಕಾಶ ನೀಡಲಾಗಿತ್ತು.

ಪ್ರವಾಸಿಗರ ಮೆಚ್ಚಿನ ತಾಣವಾಗಿ ಬದಲಾಗಿದ್ದ ಪನ್ಸೋಲಿ ಆನೆ ಬಿಡಾರ,ಆನೆ ಚಿಕಿತ್ಸಾ ಕೇಂದ್ರ ಹಾಗೂ ತರಬೇತಿ ಕೇಂದ್ರವಾಗಿ ಮಾರ್ಪಾಡು ಮಾಡಲಾಗುತಿತ್ತು.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement