ದೀಪಾವಳಿಗೆ ಮೋದಿ ಸರ್ಕಾರದಿಂದ ಬಂಪರ್ – ಪೆಟ್ರೋಲ್ ಡಿಸೇಲ್ ಬೆಲೆಯಲ್ಲಿ ಬಾರಿ ಇಳಿಕೆ!

3308

ನವದೆಹಲಿ : ಬೆಲೆ ಏರಿಕೆಯ ಬಿಸಿಯಲ್ಲಿ ಬೆಂದು ಹೋಗಿದ್ದ ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಿಗ್ ರಿಲೀಫ್ ನೀಡಿದ್ದು, ಪೆಟ್ರೋಲ್ – ಡಿಸೇಲ್ ಮೇಲಿನ ಬೆಲೆಯನ್ನು ಇಳಿಸುವ ಮೂಲಕ ಬೆಳಕಿನ ಹಬ್ಬ ದೀಪಾವಳಿಗೆ ಗಿಫ್ಟ್ ನೀಡಿದ್ದಾರೆ.

ಇಂದು ಮಹತ್ವದ ಚರ್ಚೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪೆಟ್ರೋಲ್ ಮೇಲೆ ಐದು, ಡಿಸೇಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದ್ದು ದೀಪಾವಳಿಗೆ ಪ್ರಧಾನಿ ಮೋದಿ ಬಾರಿ ಉಡುಗೊರೆ ನೀಡಿದಂತಾಗಿದೆ.

ಇಳಿಕೆ ಕಾಣಲು ಕಾರಣ ಏನು?

ಪೆಟ್ರೋಲ್ ಡಿಸೇಲ್ ಬೆಲೆ ನಿರಂತರ ಏರಿಕೆ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆಗೆ ಕಾರಣವಾಗಿತ್ತು. ಜನ ಸಾಮಾನ್ಯರ ಆಕ್ರೋಶ ಎದುರಿಸಲಾಗದ ಹಲವು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದವು. ಈ ವಿಚಾರವನ್ನು ಗಣನೆಗೆ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಪೆಟ್ರೋಲ್ ಡಿಸೇಲ್ ಮೇಲಿನ ಸುಂಕ ಇಳಿಕೆ ಮಾಡಿದ್ದಾರೆ.

ರೈತರ ಮತ್ತು ಜನ ಸಾಮಾನ್ಯರ ಹಿತ ಕಾಯಲು ಪೆಟ್ರೋಲ್ ಡಿಸೇಲ್ ಬೆಲೆ ಇಳಿಕೆ ಮಾಡಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿದೆ.

ಮುಂಬರುವ ಪಂಚರಾಜ್ಯಗಳ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈ ನಿರ್ಧಾರ ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಅದೇನೆ ಇದ್ದರೂ ಸದ್ಯ ಬೆಲೆ ಇಳಿಕೆಯಿಂದ ದೇಶದಲ್ಲಿ ಪೆಟ್ರೋಲ್ ಬೆಲೆಯಲ್ಲಿ ಐದು ರೂಪಾಯಿ ಡಿಸೇಲ್ ಬೆಲೆಯಲ್ಲಿ ಹತ್ತು ರೂಪಾಯಿ ಕಡಿಮೆಗೆ ಲಭ್ಯವಾಗಲಿದ್ದು ಜನರು ಒಂದಷ್ಟು ನಿರಾಳವಾಗಬಹುದಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!