POCSO case| ಜ್ಯೋತಿಷಿ ಕಮಲಾಕರ್ ಭಟ್ ಎರಡು ದಿನ ಪೊಲೀಸರ ವಶಕ್ಕೆ
ಸಿದ್ದಾಪುರದ ಮಹೇಶ್ ನಾಯ್ಕ ಹತ್ಯೆ ಆರೋಪದಡಿ ಕಾರವಾರದ ಜೈಲು ಸೇರಿದ್ದ ಜ್ಯೋತಿಷಿ ಕಮಲಾಕರ್ ಭಟ್ ಇದೀಗ ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಎರಡು ದಿನ ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Siddapur |ಜ್ಯೋತಿಷಿ ಕಮಲಾಕರನ ರಹಸ್ಯ -ವಿಡಿಯೋ ಜೊತೆ ಲವ್ವಿಡವ್ವಿ ಬಹಿರಂಗ!
ಪೋಕ್ಸೋ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಶಿವಮೊಗ್ಗ ನ್ಯಾಯಾಲಯ ಕಮಲಾಕರ್ ಭಟ್ನನ್ನು ಎರಡು ದಿನ ಶಿವಮೊಗ್ಗದ ಪೊಲೀಸರ ವಶಕ್ಕೆ ಒಪ್ಪಿಸಿ ಇಲ್ಲಿನ ನ್ಯಾಯಾಲಯ ಆದೇಶಿಸಿದೆ.
ಕಮಲಾಕರ್ ಭಟ್ನನ್ನು ಇಂದು ತುಂಗಾ ನಗರ ಠಾಣೆ ಪೊಲೀಸರು ಶಿವಮೊಗ್ಗ ಕೋರ್ಟ್ಗೆ ಹಾಜರುಪಡಿಸಿದ್ದರು.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ(siddapur) ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವು ಘಟನಾ ಸ್ಥಳದ ಆಧಾರದ ಮೇಲೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು.
ಈ ಸಂಬಂಧ ಪೊಲೀಸರು ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಸಿದ್ದಾಪುರದ ಅವರಗುಪ್ಪ ಗ್ರಾಮದ ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಮಲಾಕರ್ ಭಟ್ನನ್ನು ಕಾರವಾರ ಜೈಲಿನಿಂದ ಶಿವಮೊಗ್ಗದ ಪೋಕ್ಸೋ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ನ್ಯಾಯಾಲಯದ ಆದೇಶದ ಬೆನ್ನಲ್ಲೇ ತುಂಗಾನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.







