India|ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್‌ ಜೋಶಿ ನೇಮಕ

India | ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿಗೆ ಹೆಚ್ಚುವರಿ ಹೊಣೆ
ಕೇಂದ್ರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಕೇಂದ್ರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.
ಕೇಂದ್ರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

India|ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್‌ ಜೋಶಿ ನೇಮಕ.

ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ (Dharmendra Pradhan) ರಾಜೀನಾಮೆ ನೀಡಿದ ನಂತರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಗಿದೆ.

ಇದನ್ನೂ ಓದಿ:-BIG BREAKING: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ, ರಾಷ್ಟ್ರಪತಿಗಳ ಕಚೇರಿ ಇಂದು ಸಂಜೆ ಪ್ರಕಟಣೆಯಲ್ಲಿ ಜೋಶಿ ಅವರ ನೇಮಕಾತಿಯನ್ನು ದೃಢಪಡಿಸಿದೆ.

Advertisement

ಪ್ರಧಾನಿಗಳ ಶಿಫಾರಸಿನ ಮೇರೆಗೆ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ ನೀಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.

ಸದ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆಯನ್ನು ಜೋಶಿ ನಿರ್ವಹಣೆ ಮಾಡುತ್ತಿದ್ದಾರೆ.

ಪ್ರಧಾನಮಂತ್ರಿಯವರ ಆಪ್ತ ವಲಯದಲ್ಲಿ ಗುರುತಿಸಿ ಕೊಂಡಿರುವ ಹುಬ್ಬಳ್ಳಿ- ಧಾರವಾಡ ಭಾಗದ ಸಂಸದ ಪ್ರಹಲ್ಲಾದ್ ಜೋಷಿ ಪ್ರಾಮಾಣಿಕತೆ ಮೂಲಕವೇ ಕೇಂದ್ರದಲ್ಲಿ ಹೆಸರು ಮಾಡಿದವರಾಗಿದ್ದಾರೆ.ಇದೀಗ ಹೆಚ್ಚುವರಿ ಹೊಣೆಯನ್ನು ಇವರಿಗೆ ನೀಡಲಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement