ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆ ರದ್ದು ಎಸ್.ಎಸ್.ಎಲ್.ಸಿ ಪರೀಕ್ಷೆ ನೆಡೆಯಲಿದೆ- ಸುರೇಶ್ ಕುಮಾರ್.

954

ಬೆಂಗಳೂರು: ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆ ರದ್ದು ಮಾಡಿದರೂ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಬಹು ಆಯ್ಕೆಯ ಪ್ರಶ್ನೆ ಇರುತ್ತದೆ. ಈ ಪರೀಕ್ಷೆಯಲ್ಲಿ ಯಾರನ್ನು ಫೇಲ್ ಮಾಡುವುದಿಲ್ಲ. ಗ್ರೇಡ್ ಮಾದರಿಯಲ್ಲಿ 2 ದಿನ ಪರೀಕ್ಷೆ ನಡೆಯುತ್ತದೆ. ಜುಲೈ 3 ನೇ ವಾರದಲ್ಲಿ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯದೇ ಹೋದ್ರೆ ಅಂತಹ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡುತ್ತೇವೆ. ಪರೀಕ್ಷೆಗೆ 20 ದಿನ ಮುನ್ನ ವೇಳಾಪಟ್ಟಿ ಪ್ರಕಟ ಮಾಡಲಾಗುವುದು ಎಂದು ಮಾಹಿತಿ ನೀಡಿದರು. 

ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆಗಳು ರದ್ದುಗೊಂಡ ಬೆನ್ನಲ್ಲೇ ಕರ್ನಾಟಕದಲ್ಲೂ ದ್ವಿತೀಯ ಪಿಯುಸಿ  ಪರೀಕ್ಷೆ ರದ್ದುಗೊಂಡಿದೆ.

ಎಲ್ಲಾ ವಿದ್ಯಾರ್ಥಿಗಳು ಗ್ರೇಡ್ ಆಧಾರಲ್ಲಿ ಪಾಸ್ ಮಾಡಲು  ಸರ್ಕಾರ ನಿರ್ಧಾರ ಮಾಡಿದೆ.  ರಾಜ್ಯದಲ್ಲಿ ಪರೀಕ್ಷೆ ನಡೆಸುವುದು, ರದ್ದಾಗುವುದು ತಜ್ಞರು ನೀಡುವ ವರದಿಯ ಮೇಲೆ ನಿಂತಿತ್ತು. ತಜ್ಞರ ವರದಿ ಆಧಾರಿಸಿ ಸರ್ಕಾರ ಈಗ ಅಂತಿಮ ನಿರ್ಧಾರವನ್ನು ಪ್ರಕಟಿಸಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!