ನಟ ಸುದೀಪ್ ಗೆ ಸಂಕಷ್ಟ|ಶಿವಮೊಗ್ಗದಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿದ ವಕೀಲ? ಕಾರಣವೇನು?

91

ಶಿವಮೊಗ್ಗ:-ಬಿಜೆಪಿ ಸ್ಟಾರ್ ಪ್ರಚಾರಕರಾಗಿ ವಿಧಾನಸಭಾ ಚುನಾವಣೆ ಕಣಕ್ಕೆ ಇಳಿಯುತ್ತಿರುವ ನಟ ಕಿಚ್ಚ ಸುದೀಪ್ ಗೆ ಇದೀಗ ತನ್ನ ತವರಿನಲ್ಲೇ ಸಂಕಷ್ಟ ಎದುರಾಗಿದೆ‌‌. ಶಿವಮೊಗ್ಗ ಜಿಲ್ಲೆಯ ವಕೀಲ ಕೆ.ಪಿ ಶ್ರೀಪಾಲ್ ಸುದೀಪ್ ವಿರುದ್ಧ ನೀತಿ ಸಂಹಿತೆ ಅನುಸಾರ ಕಿಚ್ವ ಸುದೀಪ್ ಇವರ ಚಲನಚಿತ್ರಗಳನ್ನು , ಟಿ.ವಿ.ಶೋಗಳನ್ನು ಮತ್ತು ಅವರು ಇರುವ ಜಾಹಿರಾತುಗಳನ್ನು ಚುನಾವಣೆ ಮುಗಿಯುವ ವರೆಗೂ ತಡೆ ಹಿಡಿಯುವಂತೆ ಕೋರಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ದೂರಿನಲ್ಲಿ ಕನ್ನಡದ ಚಲನಚಿತ್ರನಟ( Sandalwood film star Sudeep) ಕಿಚ್ಚ ಸುದೀಪ್ ರವರು ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿರುವುದರಿಂದ ಚುನಾವಣೆ ಮುಗಿಯುವ ವರೆಗೂ ಅವರ ನಟನೆಯ ಯಾವುದೇ ಚಲನ ಚಿತ್ರಗಳು ಚಿತ್ರ ಮಂದಿರಗಳಲ್ಲಿ ಮತ್ತು ಟಿ.ವಿ.ಗಳಲ್ಲಿ ಪ್ರದರ್ಶನವಾಗದಂತೆ, ಅವರು ನಡೆಸಿಕೊಡುವ ಟಿ.ವಿ.ಶೋಗಳು ಪ್ರಸಾರವಾಗದಂತೆ ಮತ್ತು ಅವರು ನಟಿಸಿರುವ ಜಾಯಿರಾತುಗಳು ಸಹ ಪ್ರಸಾರವಾಗದಂತೆ ಚುನಾವಣಾ ಆಯೋಗ ಕಟ್ಟು ನಿಟ್ಟಿನ ಕ್ರಮಜರುಗಿಸಬೇಕು.

ಅವರು ಒಂದು ರಾಜಕೀಯ ಪಕ್ಷದ ಪರವಾಗಿ ಪ್ರಚಾರಮಾಡುತ್ತಿರುವುದನ್ನು ಅವರೆ ಘೋಷಣೆ ಮಾಡಿದ್ದರಿಂದ ಅವರ ನಟನೆಯ ಚಲನ ಚಿತ್ರಗಳು, ಮತ್ತು ಟಿ.ವಿ.ಶೋಗಳು ಹಾಗೂ ಜಾಹಿರಾತುಗಳು ಮತದಾರರ ಮೇಲೆ ಪ್ರಭಾವ ಬೀರುವುದರಿಂದ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ, ಆದ್ದರಿಂದ ತಕ್ಷದಿಂದ ಚುನಾವಣಾ ಆಯೋಗ ಈ ವಿಷಯಕ್ಕೆ ಸಂಬಂದಿಸಿದಂತೆ ತುರ್ತು ಕ್ರಮ ಜರುಗಿಸಬೇಕೆಂದು, ಒಬ್ಬ ಜವಬ್ದಾರಿಯುತ ನಾಗರೀಕನಾಗಿ ಒತ್ತಾಯಿಸುತ್ತಿದ್ದೇನೆ ಎಂದು ಶಿವಮೊಗ್ಗದ ವಕೀಲ ಕೆ.ಪಿ.ಶ್ರೀಪಾಲ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

#Sandalwood actor Kiccha Sudeep #Film #politics #election authority
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!