Sagar | LB ಕಾಲೇಜಿನಲ್ಲಿ ರಕ್ತದಾನ ಶಿಬಿರ- ವಿದ್ಯಾರ್ಥಿಗಳಿಂದ 50ಯುನಿಟ್ ರಕ್ತದಾನ
ಸಾಗರ: ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಪ್ರಸಿದ್ಧ ಲಾಲ್ ಬಹದ್ದೂರ್ ಕಲಾ, ವಿಜ್ಞಾನ ಮತ್ತು ಎಸ್.ಬಿ. ಸೋಲಬಣ್ಣ ಶೆಟ್ಟಿ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (NSS),ರಾಷ್ಟ್ರೀಯ ಸೈನ್ಯ ದಳ (NCC), ಯುವ ರೆಡ್ ಕ್ರಾಸ್ (YRC), ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವತಿಯಿಂದ ರೋಟರಿ ಕ್ಲಬ್, ಸಾಗರದ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ಶಿಬಿರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ನೇತ್ರ ತಪಾಸಣೆ ನಡೆಸಲಾಯಿತು. ರಕ್ತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಜೊತೆಗೆ . ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಒಟ್ಟು 50 ಯೂನಿಟ್ ರಕ್ತ ಸಂಗ್ರಹಿಸಿ ರಕ್ತನಿಧಿಗೆ ನೀಡುವ ಮೂಲಕ ರಕ್ತದಾನದ ಮಹತ್ವವನ್ನು ತಿಳಿಸಲಾಯಿತು.Sagar | ಕೆಳದಿ ಅರಸರ ಕಾಲದ ಅಪರೂಪದ ಪಚ್ಚೆಲಿಂಗ ದರ್ಶನ- ಇದರ ವಿಶೇಷ ಏನು ಗೊತ್ತಾ?
ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳು, ಸಮಾಜಸೇವೆಯ ಮನೋಭಾವ ಹಾಗೂ ರಕ್ತದಾನದ ಮಹತ್ವದ ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು.Sagar| ಲಾಡ್ಜ್ ನಲ್ಲಿ ಯುವತಿ-ಯುವಕರ ಗಾಂಜಾ ಸೇವನೆ-ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವರ ವಿರುದ್ಧ ಕೇಸ್.
ಇನ್ನೂ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಡಾ. ಶಿವಕುಮಾರ್ ಎಚ್.ಎಂ., ರೋಟರಿ ಕ್ಲಬ್‌ನ ಪದಾಧಿಕಾರಿಗಳು, ಕಾಲೇಜಿನ ಪ್ರಾಂಶುಪಾಲರಾದ ಡಾ. ಲಕ್ಷ್ಮೀಶ ಎ.ಎಸ್., NSS ಅಧಿಕಾರಿ ಪುನೀತ್ ನಾಯ್ಕ್ ಪಿ. ಹಾಗೂ NCC ಅಧಿಕಾರಿ ಕ್ಯಾಪ್ಟನ್ ನೂತನ್ ಎಚ್.ಡಿ. ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು. ಇನ್ನೂ ಈ ಒಂದು ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, NSS ಸ್ವಯಂಸೇವಕರು, NCC ಕೆಡೆಟ್‌ಗಳು, ರೋವರ್ಸ್ ಮತ್ತು ರೇಂಜರ್ಸ್ ಸದಸ್ಯರು ಹಾಗೂ YRC ವಿದ್ಯಾರ್ಥಿಗಳು ಭಾಗಿಯಾಗಿದ್ದರು.
