ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 51 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು ತಾಲೂಕುವಾರು ವಿವರ ಈ ಕೆಳಗಿನಂತಿದೆ:-

ಪ.ಜಾತಿ, ಪ.ಪಂಗಡ ಅನುದಾನ ನಿಗದಿತ ಅವಧಿಯ ಒಳಗಾಗಿ ಬಳಕೆಯಾಗಬೇಕು : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್.
ಶಿವಮೊಗ್ಗ, ಆ.11: ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಕಲ್ಯಾಣಕ್ಕಾಗಿ ಎಲ್ಲಾ ಇಲಾಖೆಗಳಲ್ಲಿ ಮೀಸಲಾಗಿರಿಸಿರುವ ಅನುದಾನವನ್ನು ನಿಗದಿತ ಅವಧಿಯ ಒಳಗಾಗಿ ಬಳಕೆ ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ.ಜಾತಿ ಮತ್ತು ಪಂಗಡ ಅನುದಾನ ಬಳಕೆ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಕ್ರಿಯಾ ಯೋಜನೆಯನ್ನು ಮೊದಲೇ ಅಂತಿಮಗೊಳಿಸಿ, ಫಲಾನುಭವಿಗಳ ಆಯ್ಕೆ, ಟೆಂಡರ್ ಪ್ರಕ್ರಿಯೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಅನುದನ ಬಿಡುಗಡೆಯಾಗುವ ಮೊದಲೇ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು.
ಕೆಲವು ಇಲಾಖೆಗಳಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆದು ಬ್ಯಾಂಕಿನಿಂದ ಆರ್ಥಿಕ ಸಹಾಯ ನೀಡಲು ಹಿಂದಿನ ವರ್ಷದ ಗುರಿ ಬಾಕಿಯಿದ್ದರೆ, ಅದನ್ನು ಪ್ರಸ್ತುತ ಹಣಕಾಸು ಸಾಲಿನಲ್ಲಿ ಪೂರ್ಣಗೊಳಿಸಬೇಕು. ಅಂತಹ ಪ್ರಸ್ತಾವನೆಗಳ ಕುರಿತು ಬ್ಯಾಂಕರ್ ಗಳ ಸಭೆಯಲ್ಲಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.
ಪ್ರಗತಿ ಪರಿಶೀಲನಾ ಸಭೆಗೆ ಕಡ್ಡಾಯವಾಗಿ ಇಲಾಖಾ ಅಧಿಕಾರಿಗಳೇ ಆಗಮಿಸಬೇಕು. ಪ್ರತಿ ತಿಂಗಳ ಪ್ರಗತಿ ವರದಿಯನ್ನು ಮೊದಲ ವಾರದ ಒಳಗಾಗಿ ಸಮಾಜ ಕಲ್ಯಾಣ ಇಲಾಖೆಗೆ ಸಹಿ ಮಾಡಿ ಸಲ್ಲಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ ನಲ್ಲಿ ಕಡ್ಡಾಯವಾಗಿ ಪ್ರಗತಿ ವರದಿಯನ್ನು ನಮೂನೆಯಲ್ಲಿ ಸಲ್ಲಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೈಶಾಲಿ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ನಾಗರಾಜ್, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.