Shivamogga | ಏರ್ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ; ಕಾರಿನ ಹಿಂಭಾಗಕ್ಕೆ ಬೈಕ್ ಡಿಕ್ಕಿ, ಯುವಕ ಸಾವು

Shivamogga | ಏರ್ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ; ಕಾರಿನ ಹಿಂಭಾಗಕ್ಕೆ ಬೈಕ್ ಡಿಕ್ಕಿ, ಯುವಕ ಸಾವು Shivamogga | ಏರ್ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ; ಕಾರಿನ ಹಿಂಭಾಗಕ್ಕೆ ಬೈಕ್ ಡಿಕ್ಕಿ, ಯುವಕ ಸಾವು
ಬೈಕ್ ಅಪಘಾತ ದೃಶ್ಯ

Shivamogga (06 ಸೆಪ್ಟೆಂಬರ್‌2026)ಶ: ನಗರದ ಏರ್ಪೋರ್ಟ್ ರಸ್ತೆಯಲ್ಲಿ ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಸಂತೆಕಡೂರು ಸಮೀಪ ನಡೆದಿದೆ.

ಮೃತ ಯುವಕನನ್ನು ಮಂಡೇನಕೊಪ್ಪ ಗ್ರಾಮದ ರಕ್ಷಿತ್ ಎನ್. (23) ಎಂದು ಗುರುತಿಸಲಾಗಿದೆ.

Shivamogga | ಏರ್ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ; ಕಾರಿನ ಹಿಂಭಾಗಕ್ಕೆ ಬೈಕ್ ಡಿಕ್ಕಿ, ಯುವಕ ಸಾವು
ಬೈಕ್ ಅಪಘಾತ ದೃಶ್ಯ

ಸಂತೆಕಡೂರು ಸಮೀಪ ಏರ್ಪೋರ್ಟ್ ರಸ್ತೆಯಲ್ಲಿ ಪಲ್ಸರ್ ಬೈಕ್ ಕಾರಿನ ಹಿಂಭಾಗಕ್ಕೆ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ರಕ್ಷಿತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಡಿಕ್ಕಿಯ ಪರಿಣಾಮ ಕಾರಿನ ಹಿಂಭಾಗದ ಗ್ಲಾಸ್‌ಗೆ ರಕ್ಷಿತ್ ಅವರ ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಗಿತ್ತಾದರೂ, ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಅವರು ಮೃತಪಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ಕಾರಿನ ಹಿಂಭಾಗ ಹಾಗೂ ಪಲ್ಸರ್ ಬೈಕ್ ಸಂಪೂರ್ಣ ಜಖಂಗೊಂಡಿವೆ.ಇದನ್ನೂ ಓದಿ:-Shivamogga| ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ತಾಯಿ ! ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ !

ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement