ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021 – 22ನೇ ಸಾಲಿನ ಬಜೆಟ್ ಮಂಡಿಸಿದ್ದು ಶಿವಮೊಗ್ಗಕ್ಕೆ ಬೆಜೆಟ್ ನಲ್ಲಿ ಏನೆಲ್ಲಾ ನೀಡಿದ್ದಾರೆ ವಿವರ ಈ ಕೆಳಗಿನಂತಿದೆ.
1) ಮಲೆನಾಡಿನ ಜಿಲ್ಲೆಗಳಲ್ಲಿ ಅಡಕೆ ಬೆಳೆಗಾರರನ್ನು ಬಾಧಿಸುತ್ತಿರುವ ಹಳದಿ ಎಲೆ ರೋಗದ ಕುರಿತು ಸಂಶೋಧನೆ ಮತ್ತು ಪರ್ಯಾಯ ಬೆಳೆ ಪ್ರೋತ್ಸಾಹಕ್ಕೆ 25 ಕೋಟಿ ರೂ.
2) ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿನಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ. ಇದಕ್ಕಾಗಿ ಎರಡು ಕೋಟಿ ರೂ. ನಿಗದಿ.
3) ಪಶುವೈದ್ಯಕೀಯ ವಿಜ್ಞಾನದಲ್ಲಿ ಆಯುರ್ವೇದ ಔಷಧಗಳ ಅಳವಡಿಕೆ ಉತ್ತೇಜಿಸಲು ಕೇಂದ್ರ ಸ್ಥಾಪನೆ.
4) ಶಿವಮೊಗ್ಗದಲ್ಲಿರುವ ಆಯುರ್ವೇದ ಕಾಲೇಜನ್ನು ಆಯುಷ್ ವಿಶ್ವವಿದ್ಯಾಲಯವನ್ನಾಗಿ ಮೇಲ್ದರ್ಜೆಗೆ.
5) ಶಿವಮೊಗ್ಗ ಮತ್ತು ಮೈಸೂರಿನಲ್ಲಿ ನೂರು ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಸಂಸ್ಥೆ ಮಾದರಿಯಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ.