ಶಿವಮೊಗ್ಗ-ಕಾರು ಅಪಘಾತ:ಸ್ಥಳದಲ್ಲೇ ಇಬ್ಬರು ಸಾವು!

725

ಶಿವಮೊಗ್ಗ: ಮರಕ್ಕೆ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಆರು ಮಂದಿಗೆ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸಿದ್ದಾಪುರ ಬಳಿ ನಡೆದಿದೆ.

ರಾಜೇಶ್ (19), ತರುಣ್ (19) ಮೃತಪಟ್ಟ ಯುವಕರು. ಘಟನೆಯಲ್ಲಿ ಗಾಯಗೊಂಡ 6 ಮಂದಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರು ಮೂಲದ 8 ಮಂದಿ ಯುವಕರು ಗೋವಾಕ್ಕೆ ಪ್ರವಾಸ ತೆರಳಿದ್ದರು. ಗೋವಾದಿಂದ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಘಟನೆ ಕುರಿತು ಭದ್ರಾವತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!