Shivamogga (06 ಸೆಪ್ಟೆಂಬರ್ 2026):-ಶಿವಮೊಗ್ಗ (shivamogga )ತಾಲೂಕಿನ ಹೊಳಲೂರು ಗ್ರಾಮದ ಗೋಡೌನ್‌ನಿಂದ ಒಣ ಅಡಿಕೆ ಕಳ್ಳತನ ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ, ಒಟ್ಟು 5.75 ಲಕ್ಷ ರೂ. ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ.
ಹೊಳಲೂರು ಗ್ರಾಮದ ಗೋಡೌನ್‌ನಲ್ಲಿ ಸಂಗ್ರಹಿಸಿಡಲಾಗಿದ್ದ 4 ಕ್ವಿಂಟಲ್ 80 ಕೆ.ಜಿ. ಒಣ ಅಡಿಕೆಯನ್ನು ಆಗಸ್ಟ್ 23ರಂದು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ:-Shivamogga | ಏರ್ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ; ಕಾರಿನ ಹಿಂಭಾಗಕ್ಕೆ ಬೈಕ್ ಡಿಕ್ಕಿ, ಯುವಕ ಸಾವು
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ರಾಹುಲ್ (25), ಜಗನ್ನಾಥ (23), ಚಂದನ್ (22), ನವೀನ್ (20) ಹಾಗೂ ಸುದೀಪ್ ಡಿ. ಅವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ 3 ಲಕ್ಷ ರೂ. ಮೌಲ್ಯದ ಇಕೋ ಕಾರು, 25 ಸಾವಿರ ರೂ. ಮೌಲ್ಯದ ಬೈಕ್ ಹಾಗೂ 2.50 ಲಕ್ಷ ರೂ. ಮೌಲ್ಯದ 4.60 ಕ್ವಿಂಟಲ್ ಒಣ ಅಡಿಕೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಒಟ್ಟು 5.75 ಲಕ್ಷ ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ರಾಘವೇಂದ್ರ ಕಾಂಡಿಕೆ, ಪಿಎಸ್‌ಐ ನವೀನ್ ಮಠಪತಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿಪಿಸಿ ಲಂಕೇಶ್, ಶ್ರೀಕಾಂತ್, ಕಾಶಿನಾಥ, ಸುನಿಲ್ ಕುಮಾರ್, ಕವನ್ ಹಾಗೂ ದಾಕ್ಷಾಯಣಿ ಅವರನ್ನು ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಪ್ರಕರಣವನ್ನು ಭೇದಿಸಿದೆ.
