Shivamogga | ಶಾಸಕರನ್ನು ಹೊತ್ತು ಕುಣಿದ ಪೊಲೀಸರು: ವಿಡಿಯೋ ವೈರಲ್ ಬೆನ್ನಲ್ಲೇ ಇಬ್ಬರು ಸಿಬ್ಬಂದಿ ವರ್ಗಾವಣೆ

ಶಿವಮೊಗ್ಗ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶಾಸಕ ಚನ್ನಬಸಪ್ಪ ಅವರನ್ನು ಪೊಲೀಸ್ ಸಿಬ್ಬಂದಿ ಹೊತ್ತು ಕುಣಿದ ದೃಶ್ಯ ಶಿವಮೊಗ್ಗ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶಾಸಕ ಚನ್ನಬಸಪ್ಪ ಅವರನ್ನು ಪೊಲೀಸ್ ಸಿಬ್ಬಂದಿ ಹೊತ್ತು ಕುಣಿದ ದೃಶ್ಯ
ಶಿವಮೊಗ್ಗ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶಾಸಕ ಚನ್ನಬಸಪ್ಪ ಅವರನ್ನು ಪೊಲೀಸ್ ಸಿಬ್ಬಂದಿ ಹೊತ್ತು ಕುಣಿದ ದೃಶ್ಯ

IMG 20260913 WA0009Karwar Shetty Eye Hospital

Ad karwar auto
ಕಾರವಾರ ದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿಮ್ಮ ಬಟ್ಟೆಗಳಿಗೆ ಹೊಳಪು ನೀಡುವ ಆರೋ ಡ್ರೈಕ್ಲೀನ್ -ಒಮ್ನೆ ಭೇಟಿ ನೀಡಿ

ಶಿವಮೊಗ್ಗ: ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶಾಸಕರನ್ನು ಪೊಲೀಸ್ ಸಿಬ್ಬಂದಿ ಹೊತ್ತು ಕುಣಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿದೆ.ಇದನ್ನೂ ಓದಿ:-Shivamogga Breaking | ವಂದೇ ಮಾತರಂ ಗೀತೆಗೆ ಅವಮಾನ ಆರೋಪ: ಕಾರ್ಯಕ್ರಮದಿಂದ ಹೊರನಡೆದ ಶಾಸಕ ಚನ್ನಬಸಪ್ಪ

ಶಿವಮೊಗ್ಗ (shivamogga)ನಗರದ ಕೋಟೆ ಶ್ರೀ ಭೀಮೇಶ್ವರ ದೇವಾಲಯದ ಬಳಿ ಸಾಗುತ್ತಿದ್ದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶಾಸಕ ಚನ್ನಬಸಪ್ಪ ಅವರು ಭಾಗವಹಿಸಿದ್ದರು. ಈ ವೇಳೆ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಗಣೇಶ್ ಹಾಗೂ ಪ್ರಕಾಶ್.ಎ.ಕೆ ಅವರು ಶಾಸಕರನ್ನು ಹೊತ್ತು ಕುಣಿದಿದ್ದರು.

ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸ್ ಸಿಬ್ಬಂದಿಯ ನಡೆ ಕುರಿತು ಶಿವಮೊಗ್ಗದಲ್ಲಿ ಚರ್ಚೆ ನಡೆದಿತ್ತು. ಇದರ ಬೆನ್ನಲ್ಲೇ ಶಿಸ್ತುಕ್ರಮದ ಭಾಗವಾಗಿ ಇಬ್ಬರು ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಆದೇಶ ಹೊರಡಿಸಿದ್ದಾರೆ.

Advertisement

ಗಣೇಶ್ ಅವರನ್ನು ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣೆಗೆ ಹಾಗೂ ಪ್ರಕಾಶ್.ಎ.ಕೆ ಅವರನ್ನು ಸೊರಬ ತಾಲೂಕಿನ ಆನವಟ್ಟಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಘಟನೆ

ಪ್ರತಿವರ್ಷದಂತೆ ಈ ವರ್ಷವೂ ಶಿವಮೊಗ್ಗ ನಗರದ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಪೂಜಾ ಕಾರ್ಯಕ್ರಮಗಳ ಬಳಿಕ ಅದೇ ದಿನ ಸಂಜೆ ಗಣಪತಿ ವಿಸರ್ಜನೆಗಾಗಿ ಮೆರವಣಿಗೆ ನಡೆಸಲಾಗಿತ್ತು.

ಪೂರ್ವ ಸಂಚಾರಿ ಪೊಲೀಸ್ ಠಾಣೆಯಿಂದ ತುಂಗಾ ನದಿಯ ಭೀಮನಮಡು ಕಡೆಗೆ ಮೆರವಣಿಗೆ ಸಾಗುತ್ತಿದ್ದ ವೇಳೆ ಶಾಸಕ ಚನ್ನಬಸಪ್ಪ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಯೂನಿಫಾರ್ಮ್‌ನಲ್ಲಿದ್ದ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಶಾಸಕರನ್ನು ಹೊತ್ತು ಕುಣಿದಿರುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿತ್ತು.

ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಘಟನೆ ಸಾರ್ವಜನಿಕ ಚರ್ಚೆಗೆ ಕಾರಣವಾಗಿತ್ತು. ಇದೀಗ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement