ಶಿವಮೊಗ್ಗ ಗಲಭೆ-62 ಜನ ವಶಕ್ಕೆ!

TextMaster 12 04 07.45.43 TextMaster 12 04 07.45.43

ಶಿವಮೊಗ್ಗ : ಬಜರಂಗದಳದ ಕಾರ್ಯಕರ್ತನ ಮೇಲೆ ದಾಳಿ ಹಿನ್ನೆಲೆಯಲ್ಲಿ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಶಾಂತಿ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೂರ್ವ ವಲಯ ಐಜಿಪಿ ರವಿ ಅವರು ಮನವಿ ಮಾಡಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುರುವಾರ ಶಿವಮೊಗ್ಗ ನಗರದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ 62 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ಇರಿಸಲಾಗಿದೆ ಎಂದರು.

ಕಾನೂನು ಸುವ್ಯವಸ್ಥೆ ಕಾಪಾಡಲು ನೆರೆಯ ಜಿಲ್ಲೆಗಳಿಂದ ಪೊಲೀಸರನ್ನು ಕರೆಸಲಾಗಿದೆ. 148 ಪ್ರದೇಶಗಳನ್ನು ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಪೊಲೀಸ್ ಬಂದೋಬಸ್ತು ತೀವ್ರಗೊಳಿಸಲಾಗಿದೆ. 9 ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಹೊರಗಿನಿಂದ ಬರುವವರ ಮೇಲೆ ನಿಗಾ ಇರಿಸಲಾಗಿದೆ. 22 ಚೀತಾ ಮತ್ತು 13 ಗಸ್ತು ಸಂಚಾರಿ ವಾಹನಗಳು ನಗರದಾದ್ಯಂತ ನಿಗಾ ಇರಿಸಿದೆ. ಯಾವುದೇ ಕಾರಣಕ್ಕೂ ಪರಿಸ್ಥಿತಿ ಬಿಗಡಾಯಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Advertisement

ಇದೇ ವೇಳೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಮಾತನಾಡಿ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಎಲ್ಲಾ ಬಿಗಿ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರ ವ್ಯಾಪ್ತಿಯಲ್ಲಿ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ದೊಡ್ಡಪೇಟೆ, ಕೋಟೆ ಮತ್ತು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಫ್ರ್ಯೂ ಮುಂದುವರಿಸಲಾಗಿದೆ. ಹಾಲು, ಔಷಧಿ ಮತ್ತಿತರ ಅಗತ್ಯ ಸಾಮಾಗ್ರಿಗಳ ಪೂರೈಕೆಗೆ ಯಾವುದೇ ನಿಬರ್ಂಧ ವಿಧಿಸಲಾಗಿಲ್ಲ. ಜನರು ವದಂತಿಗಳಿಗೆ ಕಿವಿಗೊಡದೆ ಶಾಂತಿಯನ್ನು ಕಾಪಾಡಬೇಕೆಂದು ಅವರು ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವ, ಯಾವುದೇ ವರ್ಗ ಅಥವಾ ಸಮುದಾಯದ ವಿರುದ್ಧ ಅಪರಾಧ ಮಾಡುವಂತೆ ಪ್ರಚೋದಿಸುವ ಬರಹಗಳನ್ನು ವಾಟ್ಸಪ್, ಫೇಸ್ಬುಕ್ ಮತ್ತಿತರ ಸಾಮಾಜಿಕ ಜಾಲತಾಣದಲ್ಲಿ ಹರಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್ ಪಿ ಶಾಂತರಾಜ್ ಎಚ್ಚರಿಕೆ ನೀಡಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement