ಶಿವಮೊಗ್ಗ :-ಕೋವಿಡ್ ಮೂರನೇ ಅಲೆಯಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಕಠಿಣ ನಿಯಮವನ್ನು ಇದೀಗ ಜಾರಿಗೆ ತಂದಿದೆ.
ಜಿಲ್ಲೆಯ ಸಾಗರ ತಾಲೂಕಿನ ಪ್ರಸಿದ್ಧ ಸಿಗಂದೂರು ದೇವಸ್ಥಾನಕ್ಕೆ ಇಂದಿನಿಂದ ಆಗಸ್ಟ್ 13 ರವರೆಗೆ ಧಾರ್ಮಿಕ ಎಲ್ಲಾ ಸೇವೆಗಳನ್ನು ಬಂದ್ ಮಾಡಲಾಗಿದೆ.ಭಕ್ತರಿಗೆ ದೇವಿಯ ದರ್ಶನಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದ್ದು ವೀಕೆಂಡ್ ನಲ್ಲಿ ಸಂಪೂರ್ಣ ಬಂದ್ ಗೆ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಇನ್ನು ಜಿಲ್ಲೆಯ ಪ್ರಸಿದ್ಧ ಜೋಗ ಜಲಪಾತ ನೋಡಲು ಸಹ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತಿದ್ದು ಈ ಹಿನ್ನಲೆಯಲ್ಲಿ ಜೋಗ ಭೇಟಿ ನೀಡುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ. ನೆಗಟಿವ್ ವರದಿ ಇಲ್ಲದವರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.