ಶಿವಮೊಗ್ಗ: ತಾಯಿ ಮತ್ತು ಮೂವರು ಮಕ್ಕಳು ರೈಲ್ವೆ ಸೇತುವೆಯಿಂದ ತುಂಗಾ ನದಿಗೆ ಜಿಗಿದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ತಾಯಿಯ ಹೇಳಿಕೆ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಮಕ್ಕಳು ಕಾಲು ಜಾರಿ ಸೇತುವೆಯಿಂದ ನದಿಗೆ ಬಿದ್ದಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಆ.24ರಂದು ಮಧ್ಯಾಹ್ನ ಮೂವರು ಮಕ್ಕಳೊಂದಿಗೆ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಬಂದಿದ್ದಾಗಿ ಭವಾನಿ ದೂರಿನಲ್ಲಿ ತಿಳಿಸಿದ್ದಾರೆ. ಮಕ್ಕಳನ್ನು ಲಯನ್ ಸಫಾರಿಗೆ ಕರೆದೊಯ್ಯಲು ಯೋಜಿಸಿದ್ದರು. ಆದರೆ ಊಟ ಮಾಡಿಸುವಷ್ಟರಲ್ಲಿ ಸಮಯ ಮೀರಿದ್ದರಿಂದ ಪುನಃ ಊರಿಗೆ ತೆರಳಲು ಹೊಳೆ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದರು. ಇದನ್ನೂ ಓದಿ:-Shivamogga| ಈಜಲು ಹೋದ ಬಾಲಕ ತುಂಗಾ ನಾಲೆಯಲ್ಲಿ ನೀರುಪಾಲು
ತುಂಗಾ ನದಿಯಲ್ಲಿ ನೀರನ್ನು ನೋಡುವ ಸಲುವಾಗಿ ಅರಕೇಶ್ವರ ದೇವಸ್ಥಾನದ ಕಡೆಯಿಂದ ರೈಲ್ವೆ ಸೇತುವೆ ಮೇಲೆ ನಡೆದು ಹೋಗಿದ್ದರು. ಸೇತುವೆ ಮೇಲಿಂದ ಸಾನ್ವಿಕಾ ಮತ್ತು ತಾನ್ವಿಕಾ ಕಾಲು ಜಾರಿ ನದಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು 11 ತಿಂಗಳ ಮಗವಿನೊಂದಿಗೆ ತಾನು ನದಿಗೆ ಜಿಗಿದೆ ಎಂದು ಭವಾನಿ ದೂರಿನಲ್ಲಿ ತಿಳಿಸಿದ್ದಾರೆ. ನೀರಿನ ಸೆಳೆತ ಹೆಚ್ಚಿದ್ದರಿಂದ ಇಬ್ಬರು ಮಕ್ಕಳು ಕೊಚ್ಚಿ ಹೋಗಿದ್ದಾರೆ. ಸಾರ್ವಜನಿಕರು ತನ್ನನ್ನು ಮತ್ತು 11 ತಿಂಗಳ ಮಗು ನಿಶ್ಚಿತೇಜ್‌ನನ್ನು ರಕ್ಷಿಸಿದ್ದಾರೆ ಎಂದು ಭವಾನಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ:-Shivamogga| ದಂಪತಿಗಳನ್ನ ಬೆದರಿಸಿ ಹಣ ದೋಚಿದ ಮೂವರ ಬಂಧನ

ಸೇತುವೆ ಮೇಲಿಂದ ಬಿದ್ದಿದ್ದ ಸಾನ್ವಿಕಾ ಮತ್ತು ತನ್ವಿಕಾ ಅವರ ಸುಳಿವು ಇನ್ನೂ ಸಿಕ್ಕಿಲ್ಲ. ಘಟನೆ ನಡೆದ ದಿನದಿಂದ ಸತತ ಮೂರು ದಿನ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ರಬ್ಬರ್ ಬೋಟ್ ಬಳಸಿ ತುಂಗಾ ನದಿಯ ನೀರಿನ ಅಡಿ, ನದಿ ದಂಡೆ ಮೇಲೆ ಹುಡುಕಾಟ ಮಾಡಿದರು. ಆದರೆ ಈತನ ಮಕ್ಕಳ ಸುಳಿವು ಪತ್ತೆಯಾಗಿಲ್ಲ.
ಇತ್ತ ಭವಾನಿ ನೀಡಿರುವ ಹೇಳಿಕೆ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದರು, ಪೊಲೀಸರು ವಿವಿಧ ಕೋನದಿಂದ ತನಿಖೆ ಮುಂದುವರೆಸಿದ್ದು, ಹಲವರ ವಿಚಾರಣೆ ನಡೆಸುತ್ತಿದ್ದಾರೆ.
