ಶಿವಮೊಗ್ಗದಲ್ಲಿ ಯುವಕನ ಬರ್ಬರ ಹತ್ಯೆ-ನಿಷೇಧಾಜ್ಞೆ ಜಾರಿ

2467

ಶಿವಮೊಗ್ಗ : ಅನ್ಯಕೋಮಿನ ಗುಂಪೊಂದು ಯುವಕನೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ನಿನ್ನೆ ನಡೆದಿದೆ.

ಕೊಲೆಯಾದ ಯುವಕನನ್ನು ಹರ್ಷ ಎಂದು ಗುರುತಿಸಲಾಗಿದ್ದು ಹರ್ಷ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ.

ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಎರಡು ಕೋಮಿನ ಯುವಕರ ಗುಂಪು ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿತು. ಹೀಗಾಗಿ ಮೆಗ್ಗಾನ್ ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ಸೃಷ್ಟಿಯಾಗಿ ಘರ್ಷಣೆ ನಡೆದಿದೆ. ಇನ್ನು ಸನಾಹುತ ತಪ್ಪಿಸಲು ಪೊಲೀಸರು ಲಾಠಿಚಾರ್ಜ ಮಾಡಿದ್ದಾರೆ. ಇನ್ನು ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಜಾರಿಮಾಡಿದ್ದು ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.

ಅರಗಾ ಜ್ಞಾನೇಂದ್ರ ಸ್ಪಷ್ಟನೆ.


ಇನ್ನು ಮೃತ ಯುವಕನ ಕುಟುಂಬದವರನ್ನು ಭೇಡಿಯಾದ ಗೃಹ ಸಚಿವ ಅರಗಾ ಜ್ಞಾನೇಂದ್ರ ರವರು ಮೃತ ವ್ಯಕ್ತಿಯ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು ಹತ್ಯೆ ಮಾಡಿದವರು ಯಾರು ಎಂದು ಗೊತ್ತಾಗಿದೆ. ಶೀಘ್ರದಲ್ಲಿ ಬಂಧಿಸಲಾಗುತ್ತದೆ ಜನರು ಶಾಂತಿ ಕಾಪಾಡಬೇಕು ಎಂದರು.
ಸದ್ಯ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!