Mysore: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದ ಸಿದ್ದರಾಮಯ್ಯ! ಕಾರಣವೇನು?

muda case fir was registered against cm siddaramaiah at mysuru lokayukta-police muda case fir was registered against cm siddaramaiah at mysuru lokayukta-police

Mysore: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದ ಸಿದ್ದರಾಮಯ್ಯ! ಕಾರಣವೇನು?

ಮೈಸೂರು: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನನಗೀಗ 80 ವರ್ಷ ವಯಸ್ಸಾಗಿದೆ. ವಯೋಸಹಜ ಕಾರಣಗಳಿಂದಾಗಿ ಹಿಂದಿನಂತೆ ಓಡಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಆದರೆ ವಯಸ್ಸಿನ ಕಾರಣದಿಂದಾಗಿ ಹಿಂದಿನಂತೆ ಓಡಾಡುವುದು ಕಷ್ಟವಾಗುತ್ತದೆ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಕಡೆಗಣನೆ ಆರೋಪಕ್ಕೆ ಸ್ಪಷ್ಟನೆ

Advertisement

ಇನ್ನು ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಕೆಲ ನಾಯಕರ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸೋನಿಯಾ ಗಾಂಧಿ ಅವರ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ತಡವಾಗಿ ಹೋಗಿದ್ದೆ. ಹೀಗಾಗಿ ಖಾಲಿಯಿದ್ದ ಕುರ್ಚಿಯಲ್ಲಿ ಕುಳಿತಿದ್ದೆ. ಇದರಲ್ಲಿ ಯಾವುದೇ ಕಡೆಗಣನೆಯಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವಿಚಾರವಾಗಿ ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ ಎಂದ ಅವರು, ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದರು.

ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ಚುನಾವಣೆಯಲ್ಲಿ ಅವರು ಸ್ಪರ್ಧಿಸುವುದಿಲ್ಲ ಎಂಬ ಘೋಷಣೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement