ತಂದೆಯ ಅಂತ್ಯ ಸಂಸ್ಕಾರಕ್ಕೆ ಹೂ ತರಲು ಹೋದ ಮಗ ಅಪಘಾತದಲ್ಲಿ ಸಾವು!

21391

ಶಿರಸಿ :- ಸಾರಿಗೆ ಸಂಸ್ಥೆಯ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಯಾದ ಪರಿಣಾಮ ದ್ವಿಚಕ್ರ ವಾಹನದ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಸಿ ನಗರದ ಎಸ್.ಬಿ.ಐ. ಸರ್ಕಲ್ ಬಳಿ ನಡೆದಿದೆ.

ಶಿರಸಿಯ ಗಣೇಶ ನಗರದ ರವಿಚಂದ್ರ ವಡ್ಡರ್ (34), ಸುನೀಲ ಇಂದೂರ (26) ಮೃತರು.

ರವಿಚಂದ್ರ ತಂದೆ ಹನುಮಂತಪ್ಪ ಇಂದು ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಹೂ ತರಲು ಇಬ್ಬರು ಮಾರುಕಟ್ಟೆಗೆ ತೆರಳುತ್ತಿದ್ದರು.

ಈ ವೇಳೆ ಇನ್ನೊಂದು ರಸ್ತೆಯಿಂದ ಬಂದ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಬಸ್ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾವುಕಂಡಿದ್ದು ಶಿರಸಿ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!