Sirsi| ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಗು ರಕ್ಷಣೆ |ವಿಡಿಯೋ ನೋಡಿ

Sirsi:ಶಿರಸಿ ನಗರದ ಕಸ್ತೂರಬಾ ನಗರದಲ್ಲಿ ಆಟವಾಡುತ್ತಿದ್ದ ವೇಳೆ ಎರಡು ವರ್ಷದ ಮಗು ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ. ಪಯಾಜ್‌ ಚೌಟಿ ಎಂಬವರು ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಬಾಲಕಿಯನ್ನು ರಕ್ಷಿಸಿದ ಘಟನೆ ವಿಡಿಯೋ ವೈರಲ್.
Sirsi child fell into well rescue Sirsi child fell into well rescue
Sirsi child fell into well rescue

Sirsi| ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಗು ರಕ್ಷಣೆ |ವಿಡಿಯೋ ನೋಡಿ

 Sirsi|ಕಾರವಾರ :- ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ವರ್ಷದ ಬಾಲಕಿಯನ್ನು ವ್ಯಕ್ತಿಯೋರ್ವ  ರಕ್ಷಿಸಿದ ಘಟನೆ  ಉತ್ತರ ಕನ್ನಡ ಜಿಲ್ಲೆಯ ಶಿರಸಿ (sirsi)ನಗರದ ಕಸ್ತೂರಬಾ ನಗರದಲ್ಲಿ ನಡೆದಿದೆ.ಇಲ್ಲಿನ ನಿವಾಸಿ ಭುವಿ (2) ಬಾವಿಗೆ ಬಿದ್ದು ಅದೃಷ್ಟವಶಾತ್ ಬದುಕುಳಿದ ಬಾಲಕಿಯಾಗಿದ್ದಾಳೆ.

ಮನೆಯಲ್ಲಿ ಮಗು ಕಾಣದಿದ್ದಾಗ ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಡಿದ್ದಾರೆ. ಬಾವಿಯ ಹತ್ತಿರ ಹೋದಾಗ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಆತಂಕದೊಂದಿಗೆ ಬಾವಿಯೊಳಗೆ ಇಣುಕಿ ನೋಡಿದಾಗ, ಮಗು ನೀರಿಗೆ ಇಳಿಸಲಾಗಿದ್ದ ಪಂಪ್ ಪೈಪ್ ಅನ್ನು ಗಟ್ಟಿಯಾಗಿ ಹಿಡಿದುಕೊಂಡು ಅಳುತ್ತಿರುವುದು ಕಂಡುಬಂದಿದೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ಹತ್ತಿರದಲ್ಲೇ ವಾಸವಿರುವ ಪಯಾಜ್‌ ಚೌಟಿ ಎಂಬುವವರು ತಕ್ಷಣ ಸ್ಥಳಕ್ಕೆ ಧಾವಿಸಿ ಬಾವಿಗೆ ಹಗ್ಗದ ಸಹಾಯದಿಂದ ಇಳಿದು ರಕ್ಷಣೆ ಮಾಡಿದ್ದಾರೆ.

Advertisement

ವಿಡಿಯೋ ನೋಡಿ:-

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement