Sirsi |ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ- ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಹಿಳೆ

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಶಿರಸಿ(sirsi) ತಾಲೂಕಿನ ಗೋಳಿಕಟ್ಟಾ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅರಣ್ಯ ಒತ್ತುವರಿ ತೆರವಿಗೆ ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಅರಣ್ಯ ಇಲಾಖೆಗೆ ಸೇರಿದ 389.೦7 ಎಕರೆ ಜಮೀನನ್ನು ಅರಣ್ಯ ಇಲಾಖೆ ಸ್ವಾಧೀನ ಪಡಿಸಿಕೊಂಡಿದೆ.

ಈ ಹಿಂದೆ ಗೋಳಿಕಟ್ಟಾ ದಲ್ಲಿ ಕಾಮಧೇನು ಹಾಲು ಹಾಗೂ ಹಣ್ಣು ಸಂಸ್ಕರಣಾ ಸಹಕಾರಿ ಸಂಘಕ್ಕೆ ಅರಣ್ಯ ಇಲಾಖೆ ತನ್ನ ಜಾಗವನ್ನು ಲೀಸ್ ನೀಡಿತ್ತು. ಲೀಸ್ ಮುಕ್ತಾಯವಾದರೂ ಜಾಗವನ್ನು ಬಿಟ್ಟುಕೊಟ್ಟಿರಲಿಲ್ಲ .ಈ ಸಂಬಂಧ ಧಾರವಾಡದ ಹೈಕೋರ್ಟ ನಲ್ಲಿ ದಾವೆ ಇದ್ದು ಇದೀಗ ಅರಣ್ಯ ಇಲಾಖೆ ಪರ ತೀರ್ಪು ಬಂದಿದೆ. ಇನ್ನು ಈ ಜಾಗದಲ್ಲಿ ಹಲವರು ಜಾಗವನ್ನು ಒತ್ತುವರಿ ಮಾಡಿಕೊಂಡು ವಾಸವಿದ್ದರು.

ಈ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದವಸ್ತ್ ನಲ್ಲಿ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಜೆಸಿಬಿ, ಟ್ಯಾಕ್ಟರ್ ಮೂಲಕ ಒತ್ತುವರಿ ತೆರವುಗೊಳಿಸಿದರು.ಈವೇಳೆ ಸ್ಥಳೀಯ ಮಹಿಳೆಯರು ಹಾಗೂ ವೃದ್ಧರಿಂದ ತೆರವು ಕಾರ್ಯಾಚರಣೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು ,ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ತರಾಗಿದ್ದು ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ಹಾಕಿದ ಒತ್ತುವರಿದಾರರು ರಸ್ತೆ ತಡೆ ನಡೆಸಿ, ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಗೋಳಿಕಟ್ಟಾ ಸುತ್ತಮುತ್ತ ಉದ್ವಿಘ್ನ ವಾತಾವರಣ ಉಂಟಾಗಿದ್ದು ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು (police)ಹರಸಾಹಸ ಪಟ್ಟರು.
